
ಮೈಸೂರು(ಮೇ.10):ನಗರದ ಸಾರಾ ಕನ್ವೆನ್ಷನ್ ಜೆಡಿಎಸ್ ಕಾರ್ಯಕರ್ತನ ಮೇಲೆ ಜೆಡಿಎಸ್ ರಾಜ್ಯಾಧ್ಯಕ್ಷ ಹಲ್ಲೆ ಮಾಡಿದ್ದಾರೆಂದು ಇಂದು ಎಲ್ಲ ನ್ಯೂಸ್ ಚಾನೆಲ್'ಗಳಲ್ಲಿ ಸುದ್ದಿಯಾಯಿತು.ಹುಣಸೂರು ಕ್ಷೇತ್ರದಿಂದ ಜಿ.ಟಿ. ದೇವೇಗೌಡರ ಕುಟುಂಬಕ್ಕೆ ಟಿಕೆಟ್ ನೀಡುವ ವಿಚಾರವಾಗಿ ಕೆಲವರು ಸಭೆಯಲ್ಲಿ ಗೊಂದಲ ಸೃಷ್ಟಿಸಿದರು. ಈ ವೇಳೆಯಲ್ಲಿ ಕೆಲವರಿಂದ ಕೂಗಾಟ ಕೂಡ ಉಂಟಾಯಿತು. ಈ ವೇಳೆ ಮಧ್ಯೆ ಪ್ರವೇಶಿಸಿದ ಶಾಸಕ ಸಾ.ರಾ. ಮಹೇಶ್, ಪಕ್ಷದ ವರಿಷ್ಠರು ಏನು ತೀರ್ಮಾನ ತೆಗೆದುಕೊಳ್ಳುತ್ತಾರೋ ಅದಕ್ಕೆ ಎಲ್ಲರೂ ಬದ್ಧರಾಗಬೇಕೆಂದು ಸಲಹೆ ನೀಡಿದರು. ಸಾರಾ ಮಹೇಶ್ ಮಾತಿಗೆ ಜಿ.ಟಿ. ದೇವೇಗೌಡ ಬೆಂಬಲಿಗರು ಆಕ್ಷೇಪ ವ್ಯಕ್ತಪಡಿಸಿದರು.
ಇದರಿಂದ ಕೆಲ ಕಾಲ ಗೊಂದಲ ವಾತಾವರಣ ಸೃಷ್ಟಿಯಾಗಿತ್ತು. ಇದರಿಂದ ಸಿಟ್ಟಿಗೆದ್ದ ಕುಮಾರಸ್ವಾಮಿ ಟಿಕೆಟ್ ನೀಡುವಂತೆ ಕೂಗುತ್ತಿದ್ದ ಕಾರ್ಯಕರ್ತನ ಮೇಲೆ ಕೈ ಎತ್ತಿದರು ಎಂದು ಸುದ್ದಿಯಾಗಿತ್ತು. ಆದರೆ ವಾಸ್ತವದಲ್ಲಿ ನಡೆದದ್ದೆ ಬೇರೆ ಕಾಲಿಗೆ ಬೀಳಲು ಬಂದ ಕಾರ್ಯಕರ್ತನನ್ನು ಎತ್ತಿ ಬುದ್ಧಿ ಹೇಳಿರುವುದಾಗಿ ಕುಮಾರ ಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ಕಾರ್ಯಕರ್ತ ಕೂಡ ಹೆಚ್'ಡಿಕೆ ತಮಗೆ ಕಪಾಳ ಮೋಕ್ಷ ಮಾಡಿಲ್ಲವೆಂದು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.