
ಬೆಂಗಳೂರು(ಏ.13): ಸಾಮಾಜಿಕ ಜಾಲತಾಣವನ್ನು ಪರಿಣಾಮಕಾರಿ ಯಾಗಿ ಚುನಾವಣೆಯ ಅಸ್ತ್ರವನ್ನಾಗಿ ಬಳಸಿ ಕೊಂಡು ಜನರನ್ನು ಆಕರ್ಷಿಸಿ ಅಧಿಕಾರದ ಗದ್ದುಗೆ ಹಿಡಿಯುವಲ್ಲಿ ಯಶಸ್ವಿಯಾದ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಯ ಹಾದಿಯಲ್ಲಿಯೇ ಇದೀಗ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಸಾಗಲು ಮುಂದಾಗಿದ್ದಾರೆ.
ನಗರದಲ್ಲಿನ ಐಟಿ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಕ್ರಿಯಾಶೀಲವಾಗಿರುವ ಎಂಜಿನಿಯರ್ ಹಾಗೂ ಇತರೆ ವ್ಯಕ್ತಿಗಳೊಂದಿಗೆ ಸಂವಾದ ನಡೆಸಲು ಮುಂದಾಗಿರುವ ಕುಮಾರಸ್ವಾಮಿ ಅವರು ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಏ.15ರಂದು (ಶನಿವಾರ) ಐಟಿ ಉದ್ಯೋಗಿಗಳೊಂದಿಗೆ ಸಂವಾದ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ.
ಈ ಕುರಿತು ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಟ್ಸ್‌ಆಪ್, ಫೇಸ್‌ಬುಕ್ ಫಾಲೋಅಪ್ ಮತ್ತು ಐಟಿ ಉದ್ಯೋ ಗಿಗಳ ಜತೆ ಸಂವಾದ ನಡೆಸುವ ವಿಶೇಷ ಕಾರ್ಯ ಕ್ರಮವನ್ನು 15ರಂದು ಹಮ್ಮಿಕೊಳ್ಳಲಾಗಿದೆ. ಬೆಳಗ್ಗೆ 9 ಗಂಟೆಯಿಂದ ರಾತ್ರಿ 9 ಗಂಟೆವರೆಗೆ ಈ ಕಾರ್ಯಕ್ರಮ ಜರುಗಲಿದೆ. ‘ಕರ್ನಾಟಕದ ಆಡಳಿತ ಕರ್ನಾಟಕದಿಂದಲೇ' ಎಂಬ ಘೋಷ ವಾಕ್ಯದೊಂದಿಗೆ ಕಾರ್ಯಕ್ರಮವನ್ನು ನಡೆಸಲಾಗುವುದು. ಕಳೆದ 5-6 ತಿಂಗಳಿನಿಂದ ಸ್ನೇಹಿತರು ಈ ಕಾರ್ಯಕ್ರಮ ನಡೆಸುವ ಸಿದ್ಧತೆಯಲ್ಲಿದ್ದು, ಹಲವು ವಾಟ್ಸ್‌ಆಪ್ ಗ್ರೂಪ್‌ಗಳಿಗೆ ಆಹ್ವಾನ ನೀಡಲಾಗಿದೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.