ಹೆಚ್ಡಿಕೆ ಮೇಲೆ ಮಾತ್ರ ನನ್ನ ಒಲವಿಲ್ಲ!

Published : Dec 08, 2016, 02:19 PM ISTUpdated : Apr 11, 2018, 12:49 PM IST
ಹೆಚ್ಡಿಕೆ ಮೇಲೆ ಮಾತ್ರ ನನ್ನ ಒಲವಿಲ್ಲ!

ಸಾರಾಂಶ

.  ಈ ಸಂದರ್ಭದಲ್ಲಿ ಮಾಜಿ ಸಚಿವ ದಿ. ಹೆಚ್.ಜಿ. ಗೋವಿಂದೇಗೌಡ ಅವರ ಪುತ್ರ ಜಿ.ಹೆಚ್.ವೆಂಕಟೇಶ್ ಗೌಡ ಅವರು ಶೃಂಗೇರಿ ವಿಧಾನಸಭಾ ಕ್ಷೇತ್ರದ ಅನೇಕ ಮುಖಂಡರೊಂದಿಗೆ ಪಕ್ಷಕ್ಕೆ ಸೇರ್ಪಡೆಯಾದರು.

ಬೆಂಗಳೂರು(ಡಿ.8): ಕುಮಾರಸ್ವಾಮಿಯೇ ಜೆಡಿಎಸ್'ನ ರಾಜ್ಯಾಧ್ಯಕ್ಷರಾಗಬೇಕೆಂದು ನನ್ನ ಬಯಕೆಯಲ್ಲ ಪಕ್ಷದ ಜವಾಬ್ದಾರಿ ಹೊರಲು ಯಾರಾದರೂ ಮುಂದೆ ಬಂದರೆ ಅವಕಾಶ ನೀಡುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ತಿಳಿಸಿದರು.

ನಾಳೆ ನಡೆಯಲಿರುವ ಜೆಡಿಎಸ್'ನ ರಾಜ್ಯ ಅಧ್ಯಕ್ಷೀಯ ಚುನಾವಣೆಯಲ್ಲಿ ಎಲ್ಲವೂ ಗೊತ್ತಾಗಲಿದೆ. ಜೊತೆಗೆ ಪಕ್ಷದ ಮುಖಂಡರೆಲ್ಲರೂ ಸೇರಿ ಜೆಡಿಎಸ್'ನ ರಾಜಕೀಯ ಮತ್ತು ಆರ್ಥಿಕ ಸ್ಥಿತಿಯ ಬಗ್ಗೆಯೂ ನಿರ್ಣಯ ಕೈಗೊಳ್ಳುತ್ತೇವೆ. ನಾಳೆ ನಡೆಯುವ ಕಾರ್ಯಕ್ರಮದಲ್ಲಿ ಮಾಜಿ ಸಚಿವರು ಹಾಗೂ ಮಾಜಿ ಶಾಸಕರು ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದರು.  ಈ ಸಂದರ್ಭದಲ್ಲಿ ಮಾಜಿ ಸಚಿವ ದಿ. ಹೆಚ್.ಜಿ. ಗೋವಿಂದೇಗೌಡ ಅವರ ಪುತ್ರ ಜಿ.ಹೆಚ್.ವೆಂಕಟೇಶ್ ಗೌಡ ಅವರು ಶೃಂಗೇರಿ ವಿಧಾನಸಭಾ ಕ್ಷೇತ್ರದ ಅನೇಕ ಮುಖಂಡರೊಂದಿಗೆ ಪಕ್ಷಕ್ಕೆ ಸೇರ್ಪಡೆಯಾದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿ.ಹೆಚ್.ವೆಂಕಟೇಶ್ ಗೌಡ, ದೇವೇಗೌಡರ ನಾಯಕತ್ವ, ಕಾವೇರಿ ಹೋರಾಟದಲ್ಲಿ ಅವರು ತೆಗೆದುಕೊಂಡ ನಿಲುವು ಮೆಚ್ಚುಗೆಗೆ ಪಾತ್ರವಾಗಿದೆ. ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ತರಲು ಶಕ್ತಿ ಮೀರಿ ಪ್ರಯತ್ನ ನಡೆಸುತ್ತೇವೆ. ನಮ್ಮ ತಂದೆ ಗೋವಿಂದೇಗೌಡರು ದೇವೇಗೌಡರ ಜೊತೆ ಉತ್ತಮ ಒಡನಾಟ ಹೊಂದಿದ್ದರು.  ಅವರಂತೆಯೇ ಉತ್ತಮ ಕೆಲಸ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸುತ್ತೇನೆ ಎಂದು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕರ್ನಾಟಕಕ್ಕೆ ಶೀತ ಅಲೆಯ ಕಂಟಕ: ರಾಯಚೂರಿನಲ್ಲಿ 9.4 ಡಿಗ್ರಿಗೆ ಕುಸಿದ ತಾಪಮಾನ! ಎಲ್ಲೆಲ್ಲಿ ಆರೆಂಜ್ ಅಲರ್ಟ್?
ಮುಕೇಶ್ ಅಂಬಾನಿ 68ರಲ್ಲೂ ಫಿಟ್ & ಎನರ್ಜಿಟಿಕ್‌ ಆಗಿರಲು ಬೆಳಗ್ಗಿನ ಈ ಅಭ್ಯಾಸ ಕಾರಣ!