
ಹೊಳೆನರಸೀಪುರ: ಶಾಂತಿನಗರ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಪ್ರಕರಣಕ್ಕೆ ಅಂದು ನಡೆದ ಘಟನೆಯ ಹೊರತಾಗಿ ಬೇರೆಯದೇ ಆದ ಹಿನ್ನೆಲೆಯಿದ್ದು ಅದನ್ನು ಹೊರತರುವ ತಾಕತ್ತು ಈ ಕಾಂಗ್ರೆಸ್ ಸರ್ಕಾರಕ್ಕಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೊಸಬಾಂಬ್ ಸಿಡಿಸಿದ್ದಾರೆ.
ಪಟ್ಟಣದಲ್ಲಿ ಗುರುವಾರ ರಾತ್ರಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಸಲಿಲ್ಲ. ಹ್ಯಾರಿಸ್ ಪುತ್ರನ ಪ್ರಕರಣದ ಹಿಂದೆ ಬೇರೆಯದೇ ಆದ ಬಲವಾದ ಕಾರಣ ಮತ್ತು ಹಿನ್ನೆಲೆಗಳೂ ಸಾಕಷ್ಟುಇದೆ ಎಂದಷ್ಟೇ ಹೇಳಿದರು. ಇದೇ ವೇಳೆ ಪಕ್ಷದೊಳಗಿನವರ ದಿನಕ್ಕೊಂದು ಪ್ರಕರಣಗಳು ಹೊರಬೀಳುತ್ತಿದ್ದರೂ ಕಾಂಗ್ರೆಸ್ ತನ್ನ ವರ್ತನೆ ತಿದ್ದಿಕೊಳ್ಳದೇ ಹೋದಲ್ಲಿ ರಾಜ್ಯದ ಜನರೇ ಆ ಪಕ್ಷಕ್ಕೆ ಮುಂದಿನ ಚುನಾವಣೆಯಲ್ಲಿ ಬುದ್ಧಿ ಕಲಿಸಲಿದ್ದಾರೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.