
ಮಂಡ್ಯ (ಮಾ.31): ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕನೊಬ್ಬನನ್ನು ಹಾಡಹಗಲೇ ದುಷ್ಕರ್ಮಿಗಳು ರಸ್ತೆಯಲ್ಲೇ ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕು ಭಾರತೀನಗರದ ಅರೆಚಾಕನಹಳ್ಳಿ- ಗುಡಿಗೆರೆ ಬಳಿ ಇಂದು ಬೆಳಗ್ಗೆ ನಡೆದಿದೆ.
ಮಂಡ್ಯದ ಸ್ವರ್ಣಸಂದ್ರ ಬಡಾವಣೆಯ ನಿವಾಸಿ, ಬಿದರಹೊಸಹಳ್ಳಿ ಸರ್ಕಾರಿ ಶಾಲೆ ಮುಖ್ಯ ಶಿಕ್ಷಕ ಶಶಿಭೂಷಣ್ (೩೫) ಕೊಲೆಯಾದವರು. ಮಂಡ್ಯದ ಸ್ವರ್ಣಸಂದ್ರ ಬಡಾವಣೆಯಿಂದ ಪಲ್ಸರ್ ಬೈಕ್‌ನಲ್ಲಿ ಶುಕ್ರವಾರ ಬೆಳಗ್ಗೆ 9.30 ರ ಸಮಯದಲ್ಲಿ ಶಾಲೆಗೆಂದು ಕರಡಕೆರೆ, ಅರೆಚಾಕನಹಳ್ಳಿ ಮಾರ್ಗವಾಗಿ ತೆರಳುತ್ತಿದ್ದರು. ಈ ವೇಳೆ ಅಪರಿಚಿತರು ಬೈಕ್ ಅಡ್ಡಗಟ್ಟಿ ಕತ್ತು ಕೊಯ್ದು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಸಾರ್ವಜನಿಕರು ತಕ್ಷಣ ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಗೆ ವಿಷಯ ತಿಳಿಸಿದ್ದಾರೆ. ಶಾಲಾ ಶಿಕ್ಷಕ ಕಾಳಪ್ಪ ದೂರು ನೀಡಿದ್ದಾರೆ. ಕೊಲೆಗೆ ಕಾರಣ ತಿಳಿದುಬಂದಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.