ಆರೋಗ್ಯ ಕಾರ್ಡ್‌ ಇಲ್ಲದಿದ್ದರೆ ರೇಶನ್‌/ಆಧಾರ್‌ ಕಾರ್ಡ್‌ ತೋರಿಸಿ

By Web DeskFirst Published Sep 26, 2018, 11:11 AM IST
Highlights

ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲೂ ಆರೋಗ್ಯ ಕಾರ್ಡ್‌ ಇಲ್ಲದೆ ಪಡಿತರ ಚೀಟಿ ಹಾಗೂ ಆಧಾರ್‌ ಕಾರ್ಡ್‌ ತೋರಿಸಿ ಆರೋಗ್ಯ ಕರ್ನಾಟಕ ಸೇವೆ ಪಡೆಯಬಹುದು ಎಂದು ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ.
 

ಬೆಂಗಳೂರು :  ಆರೋಗ್ಯ ಕರ್ನಾಟಕ ಯೋಜನೆಯಡಿ ನಿಗದಿತ ವೇಳೆಗೆ ರಾಜ್ಯದ ಎಲ್ಲೆಡೆ ಆರೋಗ್ಯ ಕಾರ್ಡ್‌ ವಿತರಣೆ ಸಾಧ್ಯವಾಗದ ಹಿನ್ನೆಲೆಯಲ್ಲಿ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲೂ ಆರೋಗ್ಯ ಕಾರ್ಡ್‌ ಇಲ್ಲದೆ ಪಡಿತರ ಚೀಟಿ ಹಾಗೂ ಆಧಾರ್‌ ಕಾರ್ಡ್‌ ತೋರಿಸಿ ಆರೋಗ್ಯ ಕರ್ನಾಟಕ ಸೇವೆ ಪಡೆಯಬಹುದು ಎಂದು ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ.

ಪ್ರಸ್ತುತ ರಾಜ್ಯದ ಹನ್ನೊಂದು ಆಸ್ಪತ್ರೆಗಳಲ್ಲಿ ಆರೋಗ್ಯ ಕಾರ್ಡ್‌ ವಿತರಿಸಲಾಗಿದೆ. ಆರೋಗ್ಯ ಕರ್ನಾಟಕ ಯೋಜನೆ ಜಾರಿಯಾದ ಬಳಿಕ 381 ಸರ್ಕಾರಿ ಆಸ್ಪತ್ರೆ ಹಾಗೂ 519 ಖಾಸಗಿ ಆಸ್ಪತ್ರೆ ನೋಂದಣಿ ಮಾಡಿಕೊಂಡಿವೆ. ಪ್ರಾಥಮಿಕ, ದ್ವಿತೀಯ ಹಂತದ ಸಾಧಾರಣ ಚಿಕಿತ್ಸೆ ಕೇವಲ ಸರ್ಕಾರಿ ಆಸ್ಪತ್ರೆಯಲ್ಲಿ ಪಡೆಯಬಹುದು. ದ್ವಿತೀಯ ಹಂತದ ಸಂಕೀರ್ಣ ಚಿಕಿತ್ಸೆ ಹಾಗೂ ತೃತೀಯ ಹಂತದ ಚಿಕಿತ್ಸೆಯನ್ನು ಮಾತ್ರ ಖಾಸಗಿ ಆಸ್ಪತ್ರೆಯಲ್ಲಿ ಪಡೆಯಬಹುದು.

ಮುಂದಿನ ಹಂತದಲ್ಲಿ ಎಲ್ಲಾ ಜಿಲ್ಲೆಯಲ್ಲೂ ಕಾರ್ಡ್‌ ವಿತರಿಸಲು ಕ್ರಮಕೈಗೊಳ್ಳಲಾಗುವುದು. ಹೆಚ್ಚು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ದೊರೆಯುವಂತೆ ಕ್ರಮಕೈಗೊಳ್ಳಲಾಗುವುದು. ಆದಾಗ್ಯೂ ಖಾಸಗಿ ಆಸ್ಪತ್ರೆಗಳು ಯೋಜನೆಯಡಿ ಸೇವೆ ನೀಡಲು ನಿರಾಕರಿಸಿದರೆ ಇಲಾಖೆಯ 104 ಸಹಾಯವಾಣಿಗೆ ದೂರು ನೀಡಲು ಇಲಾಖೆ ಮನವಿ ಮಾಡಿದೆ.

click me!