
ನವದೆಹಲಿ[ಜ.25]: ಪೋಲಿಯೋ ಲಸಿಕೆಯಲ್ಲಿ ಪೋಲಿಯೋ ಉಂಟು ಮಾಡುವ ವೈರಸ್‌ಗಳು ಕಂಡು ಬಂದ ಬೆನ್ನಲ್ಲೇ ಫೆ.3ರಂದು ನಡೆಯಬೇಕಿದ್ದ ಪಲ್ಸ್ ಪೋಲಿಯೋ ಅಭಿಯಾನವನ್ನು ಕೇಂದ್ರ ಆರೋಗ್ಯ ಸಚಿವಾಲಯ ಮುಂದೂಡಿದೆ.
ಬಿಹಾರ, ಮಧ್ಯಪ್ರದೇಶ ಹಾಗೂ ಕೇರಳ ಹೊರತುಪಡಿಸಿ ಉಳಿದೆಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಜ.18ರಂದು ಪತ್ರ ಬರೆದಿರುವ ಕೇಂದ್ರ ಆರೋಗ್ಯ ಇಲಾಖೆ ಅಧಿಕಾರಿ ಡಾ
ಪ್ರದೀಪ್ ಹಲ್ದಾರ್ ಎಂಬುವರು ಫೆ.3ರಂದು ಹಮ್ಮಿಕೊಳ್ಳಲಾಗಿರುವ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನವನ್ನು ಅನಿವಾರ್ಯ ಕಾರಣಗಳ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ. ಹೊಸ ದಿನಾಂಕವನ್ನು ಶೀಘ್ರ ಪ್ರಕಟಿಸಲಾಗುತ್ತದೆ ಎಂದಿದ್ದಾರೆ. ಬಿಹಾರ, ಮಧ್ಯಪ್ರದೇಶ ಹಾಗೂ ಕೇರಳದಲ್ಲಿ ಸಾಕಷ್ಟುಪೋಲಿಯೋ ಲಸಿಕೆ ದಾಸ್ತಾನು ಇರುವ ಹಿನ್ನೆಲೆಯಲ್ಲಿ ಆ ರಾಜ್ಯಗಳಲ್ಲಿ ಅಭಿಯಾನಕ್ಕೆ ಅನುವು ಮಾಡಿಕೊಡಲಾಗಿದೆ.
ಕೇಂದ್ರ ಸರ್ಕಾರ ಏಕಾಏಕಿ ಅಭಿಯಾನವನ್ನು ಮುಂದೂಡಿದ್ದಕ್ಕೆ ನಿರ್ದಿಷ್ಟಕಾರಣಗಳನ್ನು ನೀಡಿಲ್ಲ. ಮೂಲಗಳ ಪ್ರಕಾರ, ವೈರಾಣು ಮಿಶ್ರಿತ ಲಸಿಕೆ ಪತ್ತೆ ಬಳಿಕ ದೇಶದಲ್ಲಿ ಸರ್ವೇಕ್ಷಣೆ ಹೆಚ್ಚಾದ್ದರಿಂದ ಲಸಿಕೆಯ ಕೊರತೆ ಕಂಡುಬಂದಿದೆ. ಹೀಗಾಗಿ ಬೆಲೆ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ. ಆದ ಕಾರಣ, ಬಡ ರಾಷ್ಟ್ರಗಳಲ್ಲಿ ಲಸಿಕೆಗೆ ನೆರವಾಗುವ ಅಂತಾರಾಷ್ಟ್ರೀಯ ಸಂಸ್ಥೆ ‘ಗವಿ’ ಮೊರೆಗೆ ಸರ್ಕಾರ ಹೋಗಿದ್ದು, ಪೋಲಿಯೋ ಲಸಿಕೆಗಳ ಸರಬರಾಜಿನಲ್ಲಿ ಸಹಾಯ ಮಾಡುವಂತೆ ಕೋರಿಕೊಂಡಿದೆ ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ