
ಮುಂಬೈ: ದೇಶಾದ್ಯಂತ ಸಂಚಲನ ಸೃಷ್ಟಿಸಿದ್ದ ಶೀನಾ ಬೋರಾ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಇಂದ್ರಾಣಿ ಮುಖರ್ಜಿ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ಹೇಳಿದ್ದಾರೆ.
ಔಷಧಿಗಳ ಅಧಿಕ ಸೇವನೆಯಿಂದ ಇಂದ್ರಾಣಿ ಅನಾರೋಗ್ಯಕ್ಕೆ ತುತ್ತಾಗಿರಬಹುದು ಎಂದು ಪ್ರಾಥಮಿಕ ತನಿಖೆ ತಿಳಿಸಿದೆ. ಶುಕ್ರವಾರ ತಡರಾತ್ರಿ ಅನಾರೋಗ್ಯಕ್ಕೆ ತುತ್ತಾಗಿದ್ದ ಇಂದ್ರಾಣಿಯನ್ನು ಇಲ್ಲಿನ ಜೆ.ಜೆ. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶನಿವಾರದಿಂದಲೂ ಅವರ ಆರೋಗ್ಯ ಸ್ಥಿತಿಯಲ್ಲಿ ಯಾವುದೇ ಚೇತರಿಕೆ ಕಂಡುಬಂದಿಲ್ಲ.
ಸದ್ಯ ಅವರನ್ನು ಜೀವರಕ್ಷಕ ವ್ಯವಸ್ಥೆಯಡಿ ಇಡಲಾಗಿದ್ದು, ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಈಗಾಗಲೇ ಎಂಆರ್‌ಐ, ಸಿಟಿ ಸ್ಕಾ್ಯನ್ ಮಾಡಲಾಗಿದೆ. ಮೆದುಳಿಗೆ ಸರಿಯಾದ ರೀತಿಯಲ್ಲಿ ರಕ್ತ ಸಂಚಲನವಾಗುತ್ತಿಲ್ಲ ಎಂಬುದು ಖಚಿತವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. 2015ರಲ್ಲೂ ಇದೇ ರೀತಿ ಡ್ರಗ್ ಓವರ್‌ಡೋಸ್ ಆಗಿ ಒಂದು ವಾರದ ಕಾಲ ಇಂದ್ರಾಣಿ ಒಂದು ವಾರ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.