
ಚಿಕ್ಕಮಗಳೂರು : ಮಲೆನಾಡಿನಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಜನಜೀವನ ಮತ್ತೆ ಅಸ್ತವ್ಯಸ್ತವಾಗಿದೆ. ಭಾರೀ ಮಳೆ ಹಾಗೂ ಬಿರುಗಾಳಿಗೆ ರಸ್ತೆಯ ಮೇಲೆ ಮರಗಳು ಉರುಳಿ ಬಿದ್ದಿವೆ.
ಚಿಕ್ಕಮಗಳೂರು ತಾಲೂಕಿನ ಮಲ್ಲಂದೂರು ರಸ್ತೆ ಮಧ್ಯದಲ್ಲೇ ಭಾರೀ ಗಾತ್ರದ ಮರವೊಂದು ಉರುಳಿ ಬಿದ್ದಿದ್ದು ಸಂಚಾರ ತಡೆ ಉಂಟಾದ ಹಿನ್ನೆಲೆಯಲ್ಲಿ, ಪೊಲೀಸ್ ಅಧಿಕಾರಿಗಳೇ ಸ್ಥಳದಲ್ಲಿ ಮರ ತೆರವು ಕಾರ್ಯಾಚಾರಣೆ ನಡೆಸಿದ್ದಾರೆ. ಈ ವೇಳೆ ಸಖರಾಯಪಟ್ಟಣ ಪೊಲೀಸ್ ಠಾಣೆ ಪಿಎಸ್ಐ ಸುನೀತಾ ಅವರಿಗೆ ಸ್ಥಳೀಯರು ನೆರವು ನೀಡಿದ್ದಾರೆ.
ಭಾರೀ ಮಳೆ ಹಿನ್ನೆಲೆಯಲ್ಲಿ ವಿವಿಧೆಡೆ ರಸ್ತೆ ಸಂಚಾರಕ್ಕೆ ಸಮಸ್ಯೆ ಎದುರಾಗಿದೆ. ನದಿಗಳೂ ತುಂಬಿ ಹರಿಯುತ್ತಿವೆ. ಕೆಲ ದಿನಗಳ ಕಾಲ ಬಿಡುವು ನೀಡಿದ್ದ ವರುಣ ಮತ್ತೆ ಆರ್ಭಟ ಆರಂಭಿಸಿದ್ದಾನೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.