
ಬೆಂಗಳೂರು [ಜು.18] : ದಕ್ಷಿಣ ಒಳನಾಡಿನಲ್ಲಿ ಮುಂಗಾರು ಚುರುಕುಗೊಂಡ ಹಿನ್ನೆಲೆಯಲ್ಲಿ ಕಳೆದ ಮೂರು ದಿನಗಳಿಂದ ನಗರದಲ್ಲಿ ಮಳೆಯಾಗುತ್ತಿದ್ದು, ಬುಧವಾರ ರಾತ್ರಿ ನಗರದ ಕೆಲವೆಡೆ ಭಾರಿ ಪ್ರಮಾಣದಲ್ಲಿ ಮಳೆಯಾದ ವರದಿಯಾಗಿದೆ.
ಕಳೆದ ಮೂರು ದಿನಗಳಿಂದ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯ ಸುತ್ತಮುತ್ತ ಭಾಗದಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುತ್ತಿದೆ. ಬುಧವಾರ ನಗರದ ಪೂರ್ವ, ಕೇಂದ್ರ ಭಾಗದ ಕೆಲವೆಡೆ ಧಾರಾಕಾರವಾಗಿ ಗಾಳಿ ಸಹಿತ ಮಳೆ ಸುರಿದಿದೆ.
ಮರ ಹಾಗೂ ವಿದ್ಯುತ್ ಕಂಬ ಧರೆಗುರುಳಿರುವುದು, ಮನೆಗೆ ನೀರು ನುಗ್ಗಿರುವುದರ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ ಎಂದು ಬಿಬಿಎಂಪಿ ಸಹಾಯವಾಣಿ ಕೇಂದ್ರದ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.
ನಗರದಲ್ಲಿ ಸರಾಸರಿ 20 ಮಿ.ಮೀ ಮಳೆಯಾದ ವರದಿಯಾಗಿದೆ. ಬಾನಸವಾಡಿಯಲ್ಲಿ 18 ಮಿ.ಮೀ ಮಳೆಯಾಗಿದೆ. ರಾಜನಕುಂಟೆಯಲ್ಲಿ 14.5, ಅರಕೆರೆ, ಯಲಹಂಕದಲ್ಲಿ ತಲಾ 11, ರಾಮಮೂರ್ತಿ ನಗರ 10.5, ಬಿದರಹಳ್ಳಿ 8.5, ಸಂಪಂಗಿರಾಮನಗರ 8, ಸಾತನೂರು 6.5, ಅವಲಹಳ್ಳಿ 5.5 ಹಾಗೂ ಎಚ್‌ಎಎಲ್‌ನಲ್ಲಿ 3 ಮಿ.ಮೀ ಮಳೆ ಆಗಿದೆ ಎಂದು ಕೆಎಸ್‌ಎನ್‌ಡಿಎಂಸಿ ಮಾಹಿತಿ ನೀಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.