ಭಾರಿ ಮಳೆ-ಗಾಳಿ : ಕರಾವಳಿಯಲ್ಲಿ ಕಟ್ಟೆಚ್ಚರ

Published : Jul 26, 2019, 09:27 AM IST
ಭಾರಿ ಮಳೆ-ಗಾಳಿ : ಕರಾವಳಿಯಲ್ಲಿ ಕಟ್ಟೆಚ್ಚರ

ಸಾರಾಂಶ

ಕಳೆದ ಕೆಲ ದಿನಗಳಿಂದ ಕರಾವಳಿಯಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದೆ. ವೇಗವಾಗಿ ಗಾಳಿ ಬೀಸುತ್ತಿದ್ದು ಇದರಿಂದ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

ಬೆಂಗಳೂರು [ಜು.26]: ಅರಬ್ಬಿ ಸಮುದ್ರದಲ್ಲಿ ಭಾರೀ ಗಾಳಿ-ಮಳೆ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ 24 ಗಂಟೆಗಳಲ್ಲಿ ಅರಬ್ಬಿ ಸಮುದ್ರದಲ್ಲಿ ಭಾರೀ ಗಾಳಿ ಬೀಸಲಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ. ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. 3 ಮೀಟರಿಂದ 3.2 ಮೀಟರ್‌ವರೆಗೆ ಅಲೆಗಳ ಅಬ್ಬರ ಹೆಚ್ಚಾಗಲಿದೆ ಎಂದು ಮಾಹಿತಿ ನೀಡಿದೆ.

ಇನ್ನುಳಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ತಿಂಗಳಾಂತ್ಯದವರೆಗೆ ಭಾರೀ ಮಳೆ ಮುಂದುವರೆಯಲಿದೆ. ಸರಾಸರಿ 65 ಮಿ.ಮೀ ವರೆಗೆ ಮಳೆ ನಿರೀಕ್ಷಿಸಲಾಗಿದೆ. ಉತ್ತರ ಮತ್ತು ದಕ್ಷಿಣ ಒಳನಾಡು ಸೇರಿದಂತೆ ಮಲೆನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಕೆಲವೆಡೆ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕಳೆದ ಕೆಲವು ದಿನಗಳಿಗೆ ಹೋಲಿಕೆ ಮಾಡಿದರೆ, ಕರಾವಳಿ ಭಾಗದಲ್ಲಿ ಗುರುವಾರ ಮಳೆ ಪ್ರಮಾಣ ತಗ್ಗಿತ್ತು. ಉಳಿದಂತೆ ಉತ್ತರ ಮತ್ತು ದಕ್ಷಿಣ ಒಳನಾಡು ಭಾಗದಲ್ಲಿ ಸಾಧಾರಣ ಮಳೆಯಾದ ವರದಿಯಾಗಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮಾಹಿತಿ ನೀಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಎಂ, ಡಿಸಿಎಂ ನಡುವೆ ಬೂದಿ ಮುಚ್ಚಿದ ಕೆಂಡದ ಪರಿಸ್ಥಿತಿ: ಸಂಸದ ಜಗದೀಶ್ ಶೆಟ್ಟರ್
ಗೆಳೆಯರ ಜೊತೆ ಟ್ರಿಪ್ ಹೋಗಿದ್ದ ಬೆಂಗಳೂರು ನಿವಾಸಿ ಗೋವಾ ನೈಟ್ ಕ್ಲಬ್ ದುರಂತದಲ್ಲಿ ಮೃತ