ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆ : IMD ಎಚ್ಚರಿಕೆ

By Web DeskFirst Published Jul 5, 2019, 11:18 AM IST
Highlights

ದೇಶದ ಹಲವು ರಾಜ್ಯಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ. ಹಾಗಾದ್ರೆ ಎಲ್ಲೆಲ್ಲಿ ಮಳೆಯಾಗಲಿದೆ..?

ನವದೆಹಲಿ[ಜು.05] : ದೇಶದಲ್ಲಿ ಮುಂಗಾರು ಮಳೆ ಚುರುಕಾಗುತ್ತಿದ್ದು, ಮುಂದಿನ 24 ಗಂಟೆಗಳಲ್ಲಿ ಹಲವು ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ

ಈಗಾಗಲೇ ಮಹಾರಾಷ್ಟ್ರದಲ್ಲಿ ಅತ್ಯಧಿಕ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು ಮುಂದಿನ 24 ಗಂಟೆಯಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಬಹುದು ಎಂದು ಸ್ಕೈಮೆಟ್ ಎಚ್ಚರಿಸಿದೆ. 

ಕೊಂಕಣ ತೀರ, ಗೋವಾ, ಅಸ್ಸಾಂ, ಮೇಘಾಲಯ, ಒಡಿಶಾ, ಜಾರ್ಖಂಡ್ , ಚತ್ತೀಸ್ ಗಢ, ಬಿಹಾರ, ಗುಜರಾತ್ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಭಾರಿ ಪ್ರಮಾಣದಲ್ಲಿ ಮಳೆ ಸುರಿಯುವ ಸೂಚನೆ ನೀಡಿದೆ.

ಪಂಜಾಬ್, ಹರ್ಯಾಣ,ಚಂಡೀಗಢ, ದಿಲ್ಲಿ, ಉತ್ತರ ಪ್ರದೇಶ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ,ಮಿಜೋರಾಂ, ತ್ರಿಪುರ, ಒಡಿಶಾ, ಪಶ್ಚಿಮ ಬಂಗಾಳ, ಸಿಕ್ಕಿಂ ರಾಜ್ಯಗಳಲ್ಲಿಯೂ ವಾರದ ಕೊನೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮುಂಗಾರು ಅಬ್ಬರಿಸಲಿದೆ ಎಂದು IMDಯಿಂದ ಮುನ್ನೆಚ್ಚರಿಕೆ ನೀಡಲಾಗಿದೆ.

ಆದರೆ ಜುಲೈ 11 ರಿಂದ 17ರವರೆಗೆ ಈಶಾನ್ಯ ರಾಜ್ಯಗಳಲ್ಲಿ, ಪರ್ಯಾಯ ದ್ವೀಪ ಪ್ರದೇಶಗಳಲ್ಲಿ ಸಾಮಾನ್ಯ ಪ್ರಮಾಣದಲ್ಲಿ ಮಳೆಯಾಗಲಿದೆ.ಮುಂಗಾರು ಅಬ್ಬರ ತಣಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

click me!