ಸಿಲಿಕಾನ್ ಸಿಟಿಯಲ್ಲಿ ವರುಣದ ಅಬ್ಬರಕ್ಕೆ ತತ್ತರಿಸಿದ ಜನಜೀವನ

Published : Sep 10, 2017, 01:10 PM ISTUpdated : Apr 11, 2018, 12:57 PM IST
ಸಿಲಿಕಾನ್ ಸಿಟಿಯಲ್ಲಿ ವರುಣದ ಅಬ್ಬರಕ್ಕೆ ತತ್ತರಿಸಿದ ಜನಜೀವನ

ಸಾರಾಂಶ

ಮಳೆಯ ಆರ್ಭಟಕ್ಕೆ ಕೆಂಗೇರಿ ಸುತ್ತಮುತ್ತಲ ಪ್ರದೇಶದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗುವಂತಾಗಿದೆ.

ಬೆಂಗಳೂರು(ಸೆ.10): ಉದ್ಯಾನನಗರಿಯಲ್ಲಿ ಮತ್ತೆ ವರುಣನ ಆರ್ಭಟ ಮುಂದುವರೆದಿದೆ. ಮೊನ್ನೆಯಷ್ಟೇ ನಾಲ್ವರನ್ನ ಬಲಿ ಪಡೆದ ಮಳೆ, ತಡರಾತ್ರಿಯಿಂದ ಬೆಳಗಿನ ಜಾವದವರೆಗೂ ಎಡಬಿಡದೆ ಸುರಿದಿದೆ.

ಮಳೆಯ ಆರ್ಭಟಕ್ಕೆ ಕೆಂಗೇರಿ ಸುತ್ತಮುತ್ತಲ ಪ್ರದೇಶದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗುವಂತಾಗಿದೆ. ಬಸ್​​'ಗಳು ನೀರಿನಲ್ಲಿ ಮುಳುಗಿವೆ. ಧಾರಾಕಾರ ಮಳೆಯಿಂದಾಗಿ ಮನೆಗಳಿಗೆ ನೀರು ನುಗ್ಗಿ, ರಾತ್ರಿಯಿಡೀ ಜಾಗರಣೆ ನಡೆಸುವಂತಾಗಿದೆ. ಎಚ್​​ಎಸ್​ಆರ್​ ಲೇ ಔಟ್​ ಸಂಪೂರ್ಣ ಜಲಾವೃತಗೊಂಡಿವೆ.

ಇನ್ನು ವಿಶ್ವೇಶ್ವರಯ್ಯ ಲೇಔಟ್​'ನಲ್ಲೂ ಮಳೆಯ ಆರ್ಭಟ ಜೋರಾಗಿದ್ದು ಮೊಣಕಾಲಿನವರೆಗೂ ನೀರು ನಿಂತಿದೆ.  ಇನ್ನು ಕೋರಮಂಗಲ, ಮಲ್ಲೇಶ್ವರಂ, ಶಿವಾನಂದ ಸರ್ಕಲ್, ಮೆಜೆಸ್ಟಿಕ್, ಹೆಬ್ಬಾಳ, ಯಶವಂತಪುರ ಸೇರಿದಂತೆ ನಗರದಾದ್ಯಂತ ಧಾರಾಕಾರ ಮಳೆಯಾಗಿದೆ. ಆದರೆ ಮಳೆಯ ಅವಾಂತರದ ಬಗ್ಗೆ ಬಿಬಿಎಂಪಿ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಅಂತ ಸ್ಥಳೀಯರು ಆರೋಪಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಬಡ್ಡಿ ಟೂರ್ನಿ ವೇಳೆಯಲ್ಲೇ ಪ್ಲೇಯರ್‌ ರಾಣಾ ಬಲ್ಚೌರಿಯಾ ಕೊ*ಲೆ!
ಅತ್ಯಂತ ಕಡಿಮೆ ಬೆಲೆಯ ಹ್ಯಾಪಿ ನ್ಯೂ ಇಯರ್‌ ಪ್ಲ್ಯಾನ್‌ ರಿಲೀಸ್‌ ಮಾಡಿದ ಜಿಯೋ!