ಒಂದು ವಾರ ರಾಜ್ಯಾದ್ಯಂತ ಭಾರೀ ಮಳೆ

Published : May 11, 2018, 09:18 AM IST
ಒಂದು ವಾರ ರಾಜ್ಯಾದ್ಯಂತ ಭಾರೀ ಮಳೆ

ಸಾರಾಂಶ

ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ  ಮುಂದಿ ನ ಒಂದು ವಾರ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮಾಹಿತಿ ನೀಡಿದೆ.

ಬೆಂಗಳೂರು: ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ  ಮುಂದಿ ನ ಒಂದು ವಾರ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮಾಹಿತಿ ನೀಡಿದೆ. ಈ ಮಧ್ಯೆ, ಹವಾಮಾನ ಇಲಾಖೆ ಮೇ 11 ಮತ್ತು 12 ರಂದು ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಹಲವೆಡೆ ಭಾರೀ  ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಚಾಮರಾಜ ನಗರ, ಹಾಸನ, ಗದಗ ಮತ್ತು ಶಿವಮೊಗ್ಗ ಜಿಲ್ಲೆಗಳ ವಿವಿಧೆಡೆ ಶುಕ್ರವಾರ ಮತ್ತು ಶನಿವಾರ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. 

ಇದು ಮೇ 12 ರಂದು ನಡೆಯುವ ಚುನಾವಣಾ ಮತದಾನದ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ. ಬಂಗಾಳಕೊಲ್ಲಿ ಮತ್ತು ಅರಬ್ಬೀ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಏರ್ಪಟ್ಟಿರುವು ದರಿಂದ ಉತ್ತರ ಕರ್ನಾಟಕ ಭಾಗದಿಂದ ತಮಿಳುನಾಡಿನ ದಕ್ಷಿಣ  ಭಾಗದವರೆಗೆ ವಾತಾವರಣದಲ್ಲಿ ಗಾಳಿಯ ಒತ್ತಡ ಕಡಿಮೆಯಾಗಿದೆ. ಇದು ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರ ಎರಡೂ ಕಡೆಗಳಿಂದ ತೇವಾಂಶಯುಕ್ತ ಮೋಡಗಳನ್ನು ಒಳನಾಡಿನೊಳಗೆ ಚಲಿಸುವಂತೆ ಮಾಡುತ್ತದೆ.

ಇದರಿಂದ ಮುಂದಿನ ಏಳು ದಿನಗಳ ಕಾಲ  ಕೆಲವೆಡೆ ಭಾರೀ ಮಳೆ ಸೇರಿದಂತೆ ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಭಾಗಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲೂ ವಿವಿಧೆಡೆ ಮಳೆಯಾಗುವ ನಿರೀಕ್ಷೆ ಇದೆ ಎಂದು ಕೆಎಸ್‌ಎನ್‌ಡಿಎಂಸಿ ನಿರ್ದೇಶಕ ಶ್ರೀನಿವಾಸರೆಡ್ಡಿ ‘ಕನ್ನಡಪ್ರಭ’ಗೆ ಮಾಹಿತಿ ನೀಡಿದ್ದಾರೆ. 

ಮಳೆ ಅಬ್ಬರ: ಗುರುವಾರ ರಾತ್ರಿ ಚಿತ್ರದುರ್ಗ ಜಿಲ್ಲೆಯಾದ್ಯಂತ ಮಳೆಯಾ ಗಿದ್ದು, ಜಿಲ್ಲೆಯಲ್ಲಿ 87 ಮಿ.ಮೀ.ವರೆಗೂ ಗರಿಷ್ಠ ಮಳೆ ದಾಖಲಾಗಿದೆ. ಹಾಸನ 74 ಮಿ.ಮೀ, ಶಿವಮೊಗ್ಗ 63 , ಬೆಂಗಳೂರು ನಗರ 52 ಮಿ.ಮೀ ಮಳೆ ಬಿದ್ದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಾದು ಕಾದು ಸುಸ್ತಾದ ಶೆಹಬಾಜ್‌ ಷರೀಫ್‌, ಟರ್ಕಿ ಅಧ್ಯಕ್ಷರ ಜೊತೆ ಪುಟಿನ್‌ ಮೀಟಿಂಗ್‌ ವೇಳೆ ಒಳನುಗ್ಗಿದ ಪಾಕ್‌ ಪ್ರಧಾನಿ!
ಬೆಂಗಳೂರಿನಲ್ಲಿ ಇಷ್ಟೊಂದು ಚಳಿಗೆ ಕಾರಣವೇನು? ಮುಂದಿನ ಮೂರು ದಿನ ಉತ್ತರ ಕರ್ನಾಟಕದಲ್ಲಿ ಶೀತಗಾಳಿ!