ರಾಜ್ಯದಲ್ಲಿ ವರುಣ ಅಬ್ಬರಿಸುತ್ತಿದ್ದಾನೆ. ಭಾರೀ ಮಳೆಯಿಂದ ಜನಜೀವನ ತತ್ತರಿಸಿದೆ. ಇನ್ನು ಮೂರು ಗಂಟೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಬೆಂಗಳೂರು [ಆ.08]: ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಹಲವು ಜಿಲ್ಲೆಗಳು ಪ್ರವಾಹದಿಂದ ತತ್ತರಿಸಿವೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿವೆ. ಇದೇ ವೇಳೆ ಹವಾಮಾನ ಇಲಾಖೆ ಮತ್ತೊಂದು ಮುನ್ನೆಚ್ಚರಿಕೆ ನೀಡಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಕರ್ನಾಟಕ ಪ್ರವಾಹದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಶಿವಮೊಗ್ಗ, ಕೊಡಗು, ಹಾಸನ ,ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ ಜಿಲ್ಲೆಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಜಿಲ್ಲೆಗಳಲ್ಲಿ ಸೂಕ್ತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದೆ.