ವಾಯುಭಾರ ಕುಸಿತ : ಅ.6ರಿಂದ ರಾಜ್ಯದಲ್ಲಿ ಭಾರೀ ಮಳೆ

By Web DeskFirst Published Oct 3, 2018, 12:44 PM IST
Highlights

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು ಇದರಿಂದ ಅಕ್ಟೋಬರ್ 6ರಿಂದ ಸುಮಾರು ನಾಲ್ಕೈದು ದಿನ ರಾಜ್ಯದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರು :  ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳು ಕಂಡುಬರುತ್ತಿದ್ದು, ಅ.6ರಿಂದ ಸುಮಾರು ನಾಲ್ಕೈದು ದಿನ ರಾಜ್ಯದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಅದಕ್ಕೂ ಮುನ್ನ ರಾಜ್ಯದ ಕೆಲವಡೆ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ ಎಂದು ಕೆಎಸ್‌ಎನ್‌ಡಿಎಂಸಿ ನಿರ್ದೇಶಕ ಶ್ರೀನಿವಾಸ್‌ ರೆಡ್ಡಿ ‘ಕನ್ನಡಪ್ರಭ’ಕ್ಕೆ ತಿಳಿಸಿದ್ದಾರೆ.

ಅ.6ರಿಂದ ರಾಜ್ಯದಲ್ಲಿ ಆರಂಭವಾಗುವ ಮಳೆಯ ತೀವ್ರತೆ ಮಾಹಿತಿ ಲಭ್ಯವಾಗಿಲ್ಲ. ಮುನ್ನೆಚ್ಚರಿಕೆ ಕ್ರಮವಾಗಿ ಕರಾವಳಿ ತೀರದ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಎಚ್ಚರಿಕೆ ಸಂದೇಶ ನೀಡಲಾಗಿದೆ. ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ ಎಂದು ವಿವರಿಸಿದರು.

ಕೇಂದ್ರಕ್ಕೆ ಅತಿವೃಷ್ಟಿವರದಿ:

ವಿಶೇಷವಾಗಿ ಈ ವರ್ಷ ರಾಜ್ಯದಲ್ಲಿ ಅತಿವೃಷ್ಟಿಮತ್ತು ಅನಾವೃಷ್ಟಿಎರಡೂ ಉಂಟಾಗಿದೆ. ಈಗಾಗಲೇ ಅನಾವೃಷ್ಟಿಉಂಟಾಗಿರುವ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳ ವರದಿಯನ್ನು ಎನ್‌ಡಿಆರ್‌ಎಫ್‌ ಮಾನದಂಡಗಳ ಪ್ರಕಾರ ಸಿದ್ಧಪಡಿಸಲಾಗಿದೆ. ಅನಾವೃಷ್ಟಿಗೆ ಪರಿಹಾರ ನೀಡುವಂತೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಮನವಿ ಸಲ್ಲಿಸಲಿದೆ ಎಂದು ಶ್ರೀನಿವಾಸ ರೆಡ್ಡಿ ತಿಳಿಸಿದರು.

click me!