ಎಚ್ಚರ..! ಮತ್ತೆ ರಾಜ್ಯದಲ್ಲಿ ಮಳೆ ಅಬ್ಬರಿಸಲಿದೆ

Published : Aug 24, 2018, 11:57 AM ISTUpdated : Sep 09, 2018, 10:15 PM IST
ಎಚ್ಚರ..! ಮತ್ತೆ ರಾಜ್ಯದಲ್ಲಿ ಮಳೆ ಅಬ್ಬರಿಸಲಿದೆ

ಸಾರಾಂಶ

ಈಗಾಗಲೇ ಭಾರೀ ಪ್ರಮಾಣದಲ್ಲಿ ಅಬ್ಬರಿಸಿ ತಣ್ಣಗಾಗಿದ್ದ ಮಳೆ ಮತ್ತೆ ಅಬ್ಬರಿಸಲು ಸಜ್ಜಾಗಿದೆ. ಕರಾವಳಿ ಹಾಗೂ ಕೆಲ ಜಿಲ್ಲೆಗಳಲ್ಲಿ ಮುಂದಿನ ಕೆಲ ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ, 

ಬೆಂಗಳೂರು:  ಈಗಾಗಲೇ ರಾಜ್ಯದ ವಿವಿಧೆಡೆ ಅಬ್ಬರಿಸಿ ಆತಂಕ ಸೃಷ್ಟಿಸಿದ್ದ ಮಳೆರಾಯ ಇದೀಗ ಮತ್ತೆ ಅಬ್ಬರಿಸಲು ಸಜ್ಜಾಗಿದ್ದಾನೆ. ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮತ್ತೆ  ಭಾರೀ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.  ಮುಂದಿನ 2 ದಿನಗಳಲ್ಲಿ ಅತೀ ಹೆಚ್ಚು ಮಳೆ ಬೀಳಲಿದೆ ಎಂದು ಎಚ್ಚರಿಸಲಾಗಿದೆ.

ಕರಾವಳಿಯ ಹಲವು ಜಿಲ್ಲೆಗಳಲ್ಲಿಯೂ ಕೂಡ ಭಾರಿ ಮಳೆಯಾಗಲಿದೆ.  ಈ ನಿಟ್ಟಿನಲ್ಲಿ ಕರಾವಳಿಯಲ್ಲಿ ಮುಂಜಾಗ್ರತ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. 

ಇನ್ನು ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಒಳನಾಡಿನ ಬೆಂಗಳೂರು ನಗರ ಸುತ್ತ ಮೋಡ ಕವಿದ ವಾತಾವರಣ ಇರಲಿದೆ ಎಂದು ಎಚ್ಚರಿಕೆ ನೀಡಲಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Bhatkal: ಮರ ಏರಿ ಹರಕೆ ತೀರಿಸುವ ವಿಶಿಷ್ಟ ಆಚರಣೆಗೆ ಸಾಕ್ಷಿಯಾದ ಶೇಡಬರಿ ಜಾತ್ರೆ
'ನಾಯಿ-ನರಿಗಳು ಕರವೇ ಬಗ್ಗೆ ಮಾತಾಡಿದ್ರೆ ಏನ್‌ ಹೇಳೋಕೆ ಆಗುತ್ತೆ..' ಸುದೀಪ್‌ ಭೇಟಿ ಕುರಿತ ವಿವಾದದ ಬಗ್ಗೆ ನಾರಾಯಣ ಗೌಡ ತಿರುಗೇಟು