ಮುಂದಿನ 24 ಗಂಟೆಯಲ್ಲಿ ಭಾರೀ ಮಳೆ : ಹವಾಮಾನ ಇಲಾಖೆ ಎಚ್ಚರಿಕೆ

By Web DeskFirst Published Jun 28, 2019, 12:36 PM IST
Highlights

ಬೆಳಗ್ಗಿನಿಂದಲೇ ಸುರಿಯುತ್ತಿರುವ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಹಲವು ಪ್ರದೇಶಗಳಲ್ಲಿ ಟ್ರಾಫಿಕ್ ಜಾಂ ಉಂಟಾಗಿದೆ.ಅಲ್ಲದೇ ಮುಂದಿನ 24 ಗಂಟೆಯಲ್ಲಿ ಅತ್ಯಧಿಕ ಪ್ರಮಾಣದಲ್ಲಿ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಸಿದೆ. 

ಮುಂಬೈ [ಜೂ.28] : ಬಿಸಿಲ ಬೇಗೆಯಿಂದ ತತ್ತರಿಸಿದ ಮುಂಬೈ ಮಹಾನಗರದಲ್ಲಿ ಭಾರೀ ಮಳೆ ಸುರಿಯುತ್ತಿದೆ. ಶುಕ್ರವಾರ ಬೆಳಗ್ಗಿನಿಂದಲೇ ಇಲ್ಲಿನ ಜುಹು, ಮುಲುಂದ್, ವಿಲ್ಲೆ ಪಾರ್ಲೆ. ಥಾಣೆ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮಳೆಯಾಗುತ್ತಿದೆ.

ಭಾರೀ ಮಳೆಯಿಂದಾಗಿ ಹಲವೆಡೆ ರಸ್ತೆಗಳಲ್ಲಿ ಅತ್ಯಧಿಕ ಪ್ರಮಾಣದಲ್ಲಿ ನೀರು ನಿಂತಿದ್ದು, ಕಿಲೋ ಮೀಟರ್ ವರೆಗೂ ಟ್ರಾಫಿಕ್ ಜಾಂ ಉಂಟಾಗಿತ್ತು. ಬೆಳ್ಳಂಬೆಳಗ್ಗೆ ವಾಹನ ಸವಾರರು ಪರದಾಡುವಂತಾಯ್ತು.

ಅಲ್ಲದೇ ಮುಂದಿನ 24 ರಿಂದ 36 ಗಂಟೆಗಳಲ್ಲಿ ಮುಂಬೈ ನಗರದಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. 

ಬೃಹತ್ ಮುಂಬೈ ಮಹಾನಗರ ಪಾಲಿಕೆ ಈಗಾಗಲೇ ಭಾರೀ ಮಳೆಯನ್ನು ಎದುರಿಸಲು ಸಜ್ಜಾಗಿದೆ. 300 ಮಿಲಿ ಮೀಟರ್ ಮಳೆ ಸುರಿದರೂ ಕೂಡ ಯಾವುದೇ ರೀತಿಯ ಅಪಾಯಗಳು ಸಂಭವಿಸದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಮುಂಬೈ ಮೇಯರ್ ವಿಶ್ವನಾಥ್ ಮಹದೇಶ್ವರ್ ಹೇಳಿದ್ದಾರೆ. 

click me!