
ಲಕ್ನೋ(ಸೆ.29): ಮಹಾಮಳೆಗೆ ಉತ್ತರ ಪ್ರದೇಶ, ಬಿಹಾರ ರಾಜ್ಯಗಳು ತತ್ತರಿಸಿದ್ದು, ಉಭಯ ರಾಜ್ಯಗಳಲ್ಲಿ ಭೀಕರ ಮಳೆಗೆ ಒಟ್ಟು 73 ಜನರು ಮೃತಪಟ್ಟಿದ್ದಾರೆ.
ಬಿಹಾರದ ಪ್ರಯಾಗರಾಜ್, ಉತ್ತರ ಪ್ರದೇಶದ ವಾರಣಾಸಿಯಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಿದ್ದು, ಅಪಾರ ಪ್ರಮಾಣದ ಹಾನಿಯಾಗಿದೆ.
ಮಳೆಯಿಂದ ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ತಲಾ 4 ಲಕ್ಷ ರೂ. ಪರಿಹಾರ ನೀಡುವುದಾಗಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘೋಷಿಸಿದ್ದಾರೆ.
ಇನ್ನು ವರುಣನ ಆರ್ಭಟಕ್ಕೆ ಬಿಹಾರ ಕೂಡ ತತ್ತರಿಸಿದ್ದು, ರೈಲು ಸಂಚಾರ ಸಂಪೂರ್ಣ ಸ್ಥಗಿತವಾಗಿದೆ. ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಎನ್ಡಿಆರ್ಎಫ್ ಹಾಗೂ ಎಸ್ಡಿಆರ್ಎಫ್ ತಂಡಗಳಿಂದ ರಕ್ಷಣಾ ಕಾರ್ಯ ನಡೆಯುತ್ತಿದ್ದು, ನಿರಂತರ ಕಾರ್ಯಾಚರಣೆಗೆ ಸಿಎಂ ನಿತೀಶ್ ಕುಮಾರ್ ಆದೇಶಿಸಿದ್ದಾರೆ.
ಇದೇ ವೇಳೆ ರಾಜಸ್ತಾನ ಹಾಗೂ ಮಧ್ಯಪ್ರದೇಶ ಕೂಡ ಭಾರೀ ಮಳೆಗೆ ತತ್ತರಿಸಿದ್ದು, ಮುಂಜಾಗೃತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.