
ಜೆಡ್ಡಾ: ಬಹುತೇಕ ಮರಳುಗಾಡನ್ನು ಹೊಂದಿರುವ ಹಲವು ಕೊಲ್ಲಿ ರಾಷ್ಟ್ರಗಳಲ್ಲಿ ಕಳೆದ 3 - 4 ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು ಪ್ರವಾಹ ಸದೃಶ್ಯ ವಾತಾವರಣ ಸೃಷ್ಟಿಯಾಗಿದೆ. ಚಂಡಮಾರುತದ ಪರಿಣಾಮ ಸೌದಿ ಅರೇಬಿಯಾದ ಬಹುತೇಕ ಭಾಗಗಳಲ್ಲಿ 3 - 4 ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ.
ಸರ್ಕಾರ, ರೆರ್ಡ್ ಅಲರ್ಟ್ ಘೋಷಿಸಿದೆ. ಜೊತೆಗೆ ಶಾಲೆಗಳಿಗೆ ರಜೆ ಘೋಷಿಸಿದೆ. ಪ್ರವಾಹದಿಂದಾಗಿ ಮರಳುಗಾಡಿನ ಹಲವೆಡೆ ನದಿಯ ರೀತಿಯಲ್ಲಿ ನೀರು ಹರಿಯುತ್ತಿದೆ. ಕುವೈತ್‌ನಲ್ಲಿ ಸರ್ಕಾರಿ ಕಚೇರಿಗಳು, ಷೇರುಪೇಟೆ, ಶಾಲೆಗಳಿಗೆ ರಜೆ ಪ್ರಕಟಿಸಲಾಗಿದೆ.
ಭಾರೀ ಮಳೆಯಿಂದಾಗಿ ಉಂಟಾದ ಪರಿಸ್ಥಿತಿ ನಿರ್ವಹಣೆಗೆ ವಿಫಲರಾದ ರಸ್ತೆ ಮತ್ತು ಸಾರಿಗೆ ಸಚಿವರನ್ನೇ ಹುದ್ದೆಯಿಂದ ವಜಾಗೊಳಿಸಲಾಗಿದೆ. ಇನ್ನು ರಿಯಾದ್‌ನ ಕಿಂಗ್ ಖಾಲಿದ್ ವಿಮಾನ ನಿಲ್ದಾಣದ ಒಳಗೆ ಮಳೆ ನೀರು ಭಾರೀ ಪ್ರಮಾಣದಲ್ಲಿ ಸೋರುತ್ತಿದ್ದು, ಸರ್ಕಾರವನ್ನು ಮುಜುಗರಕ್ಕೀಡು ಮಾಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ