ರಾಜ್ಯದಲ್ಲಿ ಮತ್ತೆ ಅಬ್ಬರಿಸಲಿದ್ದಾನೆ ಮಳೆರಾಯ

By Web DeskFirst Published Sep 24, 2018, 9:27 AM IST
Highlights

ಸೋಮವಾರದಿಂದ ಮಳೆಯ ತೀವ್ರತೆ ಹೆಚ್ಚಾಗಲಿದೆ. ಕೆಲವು ಕಡೆ ಮಾತ್ರ ಹೆಚ್ಚಿನ ಮಳೆಯಾಗುವ ಸಾಧ್ಯತೆಗಳಿವೆ. ಉಳಿದಂತೆ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಹಾಗೂ ವಿಜ್ಞಾನಿ ಚನ್ನಬಸಪ್ಪ ಎಸ್. ಪಾಟೀಲ್ ತಿಳಿಸಿದ್ದಾರೆ.

ಬೆಂಗಳೂರು: ರಾಜ್ಯಾದ್ಯಂತ ಮುಂದಿನ ಒಂದು ವಾರ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಮತ್ತೆ ಮುಂಗಾರು ಚುರುಕಾಗಿದ್ದು, ಕರಾವಳಿ ಸೇರಿದಂತೆ ಉತ್ತರ ಮತ್ತು ದಕ್ಷಿಣ ಒಳನಾಡಿನಾದ್ಯಂತ ಸೋಮವಾರದಿಂದ ಐದಾರು ದಿನಗಳ ಕಾಲ ಉತ್ತಮ ಮಳೆಯಾಗಲಿದೆ. 

ಸೋಮವಾರದಿಂದ ಮಳೆಯ ತೀವ್ರತೆ ಹೆಚ್ಚಾಗಲಿದೆ. ಕೆಲವು ಕಡೆ ಮಾತ್ರ ಹೆಚ್ಚಿನ ಮಳೆಯಾಗುವ ಸಾಧ್ಯತೆಗಳಿವೆ. ಉಳಿದಂತೆ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಹಾಗೂ ವಿಜ್ಞಾನಿ ಚನ್ನಬಸಪ್ಪ ಎಸ್. ಪಾಟೀಲ್ ‘ಕನ್ನಡಪ್ರಭ’ಕ್ಕೆ ತಿಳಿಸಿದ್ದಾರೆ.

ಅಕ್ಟೋಬರ್ ಎರಡನೇ ವಾರ ಹಿಂಗಾರು: ರಾಜಸ್ಥಾನದಿಂದ ಹಿಂಗಾರು ಮಾರುತಗಳು ಆರಂಭವಾಗಲಿವೆ. ಆದರೆ, ಅಲ್ಲಿ ಇನ್ನೂ ಮುಂಗಾರು ಮಳೆಯಾಗುತ್ತಿದೆ. ಹೀಗಾಗಿ ರಾಜ್ಯ ದಲ್ಲಿ ಅಕ್ಟೋಬರ್ ಎರಡನೇ ವಾರದವರೆಗೆ ಮುಂಗಾರು ಮುಂದುವರೆಯಲಿದ್ದು, ಬಳಿಕ ಹಿಂಗಾರು ಆರಂಭವಾಗಲಿದೆ. ಮುಂಗಾರಿನ ಕೊನೆಯ ಅವಧಿಯಲ್ಲಿ ರಾಜ್ಯದಲ್ಲಿ ಉತ್ತಮ ಮಳೆ ಆಗುತ್ತಿರುವುದು ಹಿಂಗಾರು ಅವಧಿಯಲ್ಲಿ ಉತ್ತಮ ಮಳೆಯಾಗುವ ಲಕ್ಷಣಗಳು ಕಂಡುಬರುತ್ತಿವೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ(ಕೆಎಸ್ ಎನ್‌ಡಿಎಂಸಿ) ನಿರ್ದೇಶಕ ಶ್ರೀನಿವಾಸ್ ರೆಡ್ಡಿ ತಿಳಿಸಿದ್ದಾರೆ. 

click me!