ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : ಭಾರೀ ಮಳೆ ಎಚ್ಚರಿಕೆ

By Web DeskFirst Published Sep 20, 2018, 11:47 AM IST
Highlights

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ  ರಾಜ್ಯದ ಉತ್ತರ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರದ ಅಧಿಕಾರಿಗಳು ಹೇಳಿದ್ದಾರೆ. 

ಬೆಂಗಳೂರು :  ಬಂಗಾಳ ಕೊಲ್ಲಿಯಲ್ಲಿ ವಾಯು ಭಾರ ಕುಸಿತ ಹಿನ್ನೆಲೆಯಲ್ಲಿ ಉತ್ತರ ಒಳನಾಡಿನಲ್ಲಿ ‌ಭಾರಿ‌ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. 

ಇನ್ನು ಕರವಾಳಿ ಹಾಗೂ ಮಲೆನಾಡು ಪ್ರದೇಶದಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ನಾಳೆ ಹಾಗೂ ನಾಡಿದ್ದು 2 ದಿನಗಳ ಕಾಲ ಮಳೆ ಸುರಿಯಲಿದೆ. 

Latest Videos

ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾದ ಪರಿಣಾಮ ಮಳೆಯಾಗಲಿದೆ. ಆದರೆ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆ ಕ್ಷೀಣವಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಶ್ರೀನಿವಾಸ ರೆಡ್ಡಿ ಸುವರ್ಣ ನ್ಯೂಸ್ ಡಾಟ್ ಕಾಂಗೆ ತಿಳಿಸಿದ್ದಾರೆ.

click me!