ಮುಂದಿನ 24 ತಾಸಿನಲ್ಲಿ ಭಾರೀ ಮಳೆ : ಎಲ್ಲೆಲ್ಲಿ..?

By Web DeskFirst Published Jun 7, 2019, 9:25 AM IST
Highlights

ಮುಂದಿನ 24 ಗಂಟೆಗಳಲ್ಲಿ ಭಾರೀ ಪ್ರಮಾಣದಲ್ಲಿ ಮಲೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. 

ಬೆಂಗಳೂರು :  ಕರಾವಳಿ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಮೇಲ್ಮೈ ಸುಳಿಗಾಳಿ ಹಾಗೂ ಗಾಳಿಯ ಒತ್ತಡ ಕಡಿಮೆ ಆಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಗುಡುಗು, ಮಿಂಚು, ಗಾಳಿ ಸಹಿತ ಮಳೆ ಆಗುತ್ತಿದೆ. ಮುಂದಿನ 24 ಗಂಟೆಗಳಲ್ಲಿ ಕರಾವಳಿ ಜಿಲ್ಲೆಗಳು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ ಹಾಗೂ ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ತುಮಕೂರು, ಕೋಲಾರ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ.

ಉಳಿದಂತೆ ಉತ್ತರ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ತುಂತುರು ಮತ್ತು ಸಾಧಾರಣ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದ್ದು, ಕಡಲ ತೀರದಲ್ಲಿ ಅಲೆ ಅಬ್ಬರ ಹೆಚ್ಚಾಗಿದೆ. 

ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಗುರುವಾರ ರಾಯಚೂರು ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಿದ್ದು, ಬಾಗಲಕೋಟೆ, ಬಳ್ಳಾರಿ, ಬೆಳಗಾವಿ, ಬೆಂಗಳೂರು ಗ್ರಾಮಾಂತರ, ಹಾಸನ, ಕಲಬುರಗಿಯಲ್ಲಿ ತುಂತುರು ಮಳೆಯಾದ ವರದಿಯಾಗಿದೆ ಎಂದು ಕೆಎಸ್‌ಎನ್‌ಡಿಎಂಸಿ ಮಾಹಿತಿ ನೀಡಿದೆ.

click me!