ವಾಯುಭಾರ ಕುಸಿತ : ರಾಜ್ಯದ ಹಲವೆಡೆ ಮತ್ತೆ ಭಾರೀ ಮಳೆ

By Suvarna News  |  First Published Sep 22, 2019, 11:17 AM IST

ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹಲವೆಡೆ ಮತ್ತೆ ಭಾರೀ ಮಳೆಯಾಗುವ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನಿಡಿದೆ. 


ಬೆಂಗಳೂರು [ಸೆ.22]:  ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮುಂಗಾರು ಚುರುಕುಗೊಂಡಿದ್ದು ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. 

ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಹಾಗೂ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡು ಭಾಗದಲ್ಲಿ ಮುಂಗಾರು ಚುರುಕುಗೊಂಡಿದೆ. ಇದರ ಪರಿಣಾಮ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದಿದೆ. 

Tap to resize

Latest Videos

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ದಕ್ಷಿಣ ಒಳನಾಡಿನಲ್ಲಿ ಮುಂಗಾರು ಮಳೆಯ ತೀವ್ರತೆ ಹೆಚ್ಚುವ ಸಾಧ್ಯತೆ ಇದ್ದು, ಮುಂದಿನ 5 ದಿನಗಳಲ್ಲಿ ಉತ್ತರ ಒಳನಾಡು, ಮಲೆನಾಡು, ಕರಾವಳಿ ಸೇರಿ ರಾಜ್ಯದೆಲ್ಲೆಡೆ ವ್ಯಾಪಿಸಲಿದೆ. ಅಲ್ಲದೆ 65 ಮಿ.ಮೀ.ನಿಂದ 115 ಮಿ.ಮೀ.ವರೆಗೆ ಮಳೆಯಾಗಲಿದೆ ಎಂದು ತಿಳಿಸಿದೆ.

ಬೆಂಗಳೂರಲ್ಲಿ ಭಾರಿ ಮಳೆ : ಬೆಂಗಳೂರು ನಗರದಲ್ಲಿ ಭಾನುವಾರ ಬೆಳಗ್ಗಿನಿಂದಲೂ ಹೆಚ್ಚಿನ ಮಳೆ ಸುರಿಯುತ್ತಿದೆ. ಇನ್ನೂ ಹೆಚ್ಚಿನ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

 

BBMP Rainfall Forecast: Widespread moderate to heavy rains associated with thunderstorm activity likely over BBMP area. pic.twitter.com/8rKgO0q05z

— KSNDMC (@KarnatakaSNDMC)
click me!