
ತಿರುವನಂತಪುರ [ಜು.17]: ಮುಂದಿನ ಎರಡು- ಮೂರು ದಿನಗಳಲ್ಲಿ ಕೇರಳದಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಈ ಹಿನ್ನೆಲೆಯಲ್ಲಿ ಇಡುಕ್ಕಿ, ಮಲಪ್ಪುರಂ, ವಯನಾಡ್, ಕಣ್ಣೂರ್, ಎರ್ನಾಕುಲಂ ಮತ್ತು ತ್ರಿಶ್ಯೂರು ಜಿಲ್ಲೆಗಳಲ್ಲಿ ಜು.18 ರಿಂದ 20ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆ ಬೀಳುವ ಮುನ್ಸೂಚನೆ ಇದೆ.
ಭಾರೀ ಮಳೆಯಿಂದ ಪ್ರವಾಹ ಮತ್ತು ಭೂಕುಸಿತ ಉಂಟಾಗುವ ಸಾಧ್ಯತೆ ಇದೆ. ಇದರಿಂದ ನಾಗರಿಕರು ಮುನ್ನೆಚ್ಚರಿಕೆ ವಹಿಸಬೇಕು. ಸೂಕ್ತ ರಕ್ಷಣಾ ವ್ಯವಸ್ಥೆ ಮಾಡಿಕೊಳ್ಳಿ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಮ್ಮ ಫೇಸ್‌ಬುಕ್‌ನಲ್ಲಿ ಸಲಹೆ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.