ರಾಜ್ಯದ ಹಲವೆಡೆ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

By Web DeskFirst Published Jun 1, 2019, 10:42 AM IST
Highlights

ರಾಜ್ಯದ ದಕ್ಷಿಣ ಒಳನಾಡು ಸೇರಿದಂತೆ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಬೆಂಗಳೂರು :  ರಾಜ್ಯದ ದಕ್ಷಿಣ ಒಳನಾಡು ಸೇರಿದಂತೆ ಕೆಲವಡೆ ಮುಂದಿನ ಎರಡು ದಿನ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಮುಖ್ಯವಾಗಿ ಬೆಂಗಳೂರು ನಗರ, ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಹಾಸನ, ಕೊಡಗು, ಮೈಸೂರು ಹಾಗೂ ರಾಮನಗರದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಕೆಆರ್‌ ಎಸ್‌ನಲ್ಲೂ ನೀರಿಲ್ಲ, ಮುಂಗಾರು ಕೈ ಕೊಟ್ಟರೆ ಬೆಂಗಳೂರಿಗೆ ಅಧೋಗತಿ!

ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆದಿದೆ. ಇದರಿಂದ ಉಷ್ಣಾಂಶದ ಪ್ರಮಾಣ ವಾಡಿಕೆಗಿಂತ 2ರಿಂದ 3 ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗಿ ಬೀಸಿಗಾಳಿ ಬೀಸುತ್ತಿದೆ. ಇನ್ನು ಎರಡು ಮೂರು ದಿನ ಇದೇ ವಾತಾವರಣ ಮುಂದುವರೆಯಲಿದ್ದು, ರಾಜ್ಯಕ್ಕೆ ಮುಂಗಾರು ಪ್ರವೇಶದ ಬಳಿಕ ಉಷ್ಣಾಂಶದಲ್ಲಿ ಇಳಿಕೆಯಾಗಲಿದೆ. 

ಉತ್ತರ ಒಳನಾಡಿನ ಕೆಲವೆಡೆಯೂ ಗುಡುಗು, ಆಲಿಕಲ್ಲು, ಗಾಳಿ ಸಹಿತ ಮಳೆಯಾಗಲಿದೆ ಎಂದು ಸುನೀಲ್‌ ಗವಾಸ್ಕರ್‌ ತಿಳಿಸಿದ್ದಾರೆ.

click me!