
ಕಾಶ್ಮೀರ (ಸೆ.30): ಉರಿ ಹುತಾತ್ಮ ಯೋಧರ ಕುಟುಂಬಗಳಿಗಾಗಿ ನೆರವಾಗಲು ಸೂರತ್‌ನಲ್ಲಿ ನಿನ್ನೆ ಸಂಗೀತ ಕಚೇರಿ ನಡೆಯಿತು.
ಈ ಸಂಗೀತ ಕಚೇರಿಯಲ್ಲಿ ಗುಜರಾತಿ ಕಲಾವಿದರು ಕಾರ್ಯಕ್ರಮ ನಡೆಸಿಕೊಟ್ಟರು. ಈ ಕಾರ್ಯಕ್ರಮದಿಂದ ಸಂಗ್ರಹವಾಗಿದ್ದು ಎಷ್ಟು ಗೊತ್ತಾ? ಬರೋಬ್ಬರಿ 1 ಕೋಟಿ ರೂಪಾಯಿ.
ಉರಿ ದಾಳಿಯಲ್ಲಿ ಮೃತಪಟ್ಟ ಯೋಧರ ಕುಟುಂಬಗಳಿಗೆ ನೆರವು ನೀಡುವ ಸಲುವಾಗಿ ಈ ವಿಶೇಷ ಸಂಗೀತ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು. ಗುಜರಾತಿ ಕಲಾವಿದರು ನಡೆಸಿಕೊಟ್ಟ ಈ ಕಾರ್ಯಕ್ರಮವನ್ನು ಮಹೇಶ್ ಸಾವನಿ ಆಯೋಜಿಸಿದ್ದರು.
ಕಾರ್ಯಕ್ರಮ ನೋಡಲು ಆಗಮಿಸಿದ್ದ ಸಂಗೀತ ಪ್ರಿಯರು ನೆರವಿನ ಮಹಾಪೂರವನ್ನೇ ಹರಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಕಾರ್ಯಕ್ರಮದ ಆಯೋಜಕ ಮಹೇಶ್ ಸಾವನಿ, ಕಾರ್ಯಕ್ರಮದಲ್ಲಿ 1 ಕೋಟಿ ರೂ. ಮೊತ್ತ ಸಂದಾಯವಾಗಿದೆ. ಈ ಹಣವನ್ನು ಉರಿ ದಾಳಿಯಲ್ಲಿ ಹುತಾತ್ಮರಾದ ಕುಟುಂಬಗಳಿಗೆ ತಲುಪಿಸಲಾಗುತ್ತದೆ ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.