
ಚೆನ್ನೈ(ಮೇ.31): ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಹಾಗೂ ಅವರ ಮೂವರು ಆಪ್ತರ 6 ಕಂಪನಿಗಳಿಗೆ ಸೇರಿದ ನೂರಾರು ಕೋಟಿ ರು. ಮೌಲ್ಯದ 68 ಆಸ್ತಿಗಳನ್ನು ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆಯನ್ನು ತಮಿಳುನಾಡು ಸರ್ಕಾರ ಸದ್ದಿಲ್ಲದೆ ಪ್ರಾರಂಭಿಸಿದೆ.
ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಬೆಂಗಳೂರಿನ ವಿಶೇಷ ನ್ಯಾಯಾಲಯ ನೀಡಿದ್ದ ತೀರ್ಪನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿರುವ ಹಿನ್ನೆಲೆಯಲ್ಲಿ ಜಯಲಲಿತಾ, ಅವರ ಆಪ್ತರೂ ಆಗಿರುವ, ವಿ.ಕೆ. ಶಶಿಕಲಾ, ಇಳವರಸಿ, ಸುಧಾಕರನ್ಗೆ ಸೇರಿದ ಆಸ್ತಿ ಸ್ವಾಧೀನಕ್ಕೆ ಪಡೆಯುವ ಪ್ರಕ್ರಿಯೆ ಶುರುವಾಗಿದೆ.
ಪ್ರಕರಣ ಸಂಬಂಧ ತನಿಖಾ ಹಂತದಲ್ಲಿ 128 ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿತ್ತು. ಆ ಪೈಕಿ 68 ಆಸ್ತಿಗಳನ್ನು ಸರ್ಕಾರದ ವಶಕ್ಕೆ ಪಡೆಯುವಂತೆ ವಿಚಾರಣಾ ನ್ಯಾಯಾ ಲಯ ಆದೇಶಿಸಿತ್ತು. ಅದರಂತೆ ಅಧಿಕಾರಿ ಗಳು ಆಸ್ತಿ ಸ್ವಾಧೀನ ಮಾಡುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.