
ಒಡಿಸ್ಸಾ, [ಡಿ.16]: ವರ್ಧಾ ಚಂಡಮಾರುತಕ್ಕೆ ತತ್ತರಿಸಿದ್ದ ಆಂಧ್ರಪ್ರದೇಶ ಮತ್ತು ತಮಿಳುನಾಡಿಗೆ ಮತ್ತೊಂದು ಚಂಡಮಾರುತದ ಭೀತಿ ಎದುರಾಗಿದೆ.
ಬಂಗಾಳಕೊಲ್ಲಿಯಲ್ಲಿ ಅಪ್ಪಳಿಸಿರುವ 'ಫೆಥಾಯ್' ಚಂಡಮಾರುತ ಈಗ ಆಂಧ್ರ ಮತ್ತು ಚೆನ್ನೈನ ತಮಿಳುನಾಡಿನ ಕರಾವಳಿ ಪ್ರದೇಶಗಳ ಕಡೆಗೆ ಸಾಗುತ್ತಿದೆ. ಈ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮಕೈಗೊಳ್ಳುವಂತೆ ರಾಷ್ಟ್ರೀಯ ವಿಪತ್ತು ಪಡೆ ಎಚ್ಚರಿಸಿದೆ.
ಚಂಡಮಾರುತವು ಸೋಮವಾರ ಓಂಗೋಲ್ ಮತ್ತು ಕಾಕಿನಾಡದ ನಡುವೆ ಕರಾವಳಿ ದಾಟುವ ಸಾಧ್ಯತೆ ಇದೆ. ದಕ್ಷಿಣ ಆಂಧ್ರಪ್ರದೇಶ, ಉತ್ತರ ತಮಿಳುನಾಡು ಮತ್ತು ಪುದುಚೇರಿ ಕರಾವಳಿಯಲ್ಲಿ 45-55 ಕಿ.ಮೀ. ಮತ್ತು 65 ಕಿ.ಮೀ. ವೇಗದಲ್ಲಿ ಚಂಡಮಾರುತ ಧಾವಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಅಷ್ಟೇ ಅಲ್ಲದೇ ಇಂದು [ಭಾನುವಾರ] ಮತ್ತು ನಾಳೆ [ಸೋಮವಾರ] ಆಂಧ್ರಪ್ರದೇಶ ಕರಾವಳಿಯಿಂದ ಮೀನುಗಾರಿಕೆ ಕಾರ್ಯಾಚರಣೆಯನ್ನು ಸಂಪೂರ್ಣವಾಗಿ ರದ್ದುಪಡಿಸಬೇಕೆಂದು ಐಎಂಡಿ ಕರೆ ಸೂಚಿಸಿದೆ. ಈ ಚಂಡಮಾರುತದಿಂದಾಗಿ ತಮಿಳುನಾಡು ಮತ್ತು ಆಂಧ್ರ ಪ್ರದೇಶ ಕೆಲ ಭಾಗದ ಜನರಿಗೆ ಆತಂಕ ಸೃಷ್ಟಿ ಮಾಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ