ರಾಜ್ಯಕ್ಕೂ ತಟ್ಟಿದ ಓಖಿ ಅಬ್ಬರ : ಕರಾವಳಿಯಲ್ಲಿ ಹೈ ಅಲರ್ಟ್

Published : Dec 02, 2017, 07:27 AM ISTUpdated : Apr 11, 2018, 12:51 PM IST
ರಾಜ್ಯಕ್ಕೂ ತಟ್ಟಿದ ಓಖಿ ಅಬ್ಬರ : ಕರಾವಳಿಯಲ್ಲಿ ಹೈ ಅಲರ್ಟ್

ಸಾರಾಂಶ

24 ಗಂಟೆಗಳ ಅವಧಿಯಲ್ಲಿ 45ರಿಂದ 65 ಕಿಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಮಂಗಳೂರು(ಡಿ.2): ಓಖಿ ಚಂಡಮಾರುತದ ಪ್ರತಾಪ ಕರ್ನಾಟಕಕ್ಕೂ ಕೂಡ ತಟ್ಟಿದೆ. ಈ ನಿಟ್ಟಿನಲ್ಲಿ ಕರ್ನಾಟಕ ಕರಾವಳಿಯಲ್ಲಿ ಕಟ್ಟೆಚ್ಚರ ವಹಿಸಲು ಜನರಿಗೆ ಸೂಚನೆ ನೀಡಲಾಗಿದೆ.  24 ಗಂಟೆಗಳ ಅವಧಿಯಲ್ಲಿ 45ರಿಂದ 65 ಕಿಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ತೀರ ಪ್ರದೇಶದಲ್ಲಿ ನಾಲ್ಕು ಮೀಟರ್ ಎತ್ತರಕ್ಕೆ ಅಲೆಗಳು ಅಪ್ಪಳಿಸುವ ಸಾಧ್ಯತೆ ಇದೆ ಎನ್ನಲಾಗಿದೆ.  ಲಕ್ಷದ್ವೀಪ ಸಮೀಪದ ಅರಬ್ಬಿ ಸಮುದ್ರದಲ್ಲಿ ಓಖಿ ಅಬ್ಬರಕ್ಕೆ  3 ಹಡಗುಗಳು ನೀರುಪಾಲಾಗಿದ್ದು, ಈ ಹಿನ್ನೆಲೆಯಲ್ಲಿ ಇಲ್ಲಿನ ಮೀನುಗಾರರಿಗೂ ಕೂಡ ಕಡಲಿಗೆ ಇಳಿಯದಂತೆ ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದೆ.  ಮಂಗಳೂರು - ಕಾರವಾರ ಮಧ್ಯೆಯೂ ಓಖಿ ಹಿನ್ನೆಲೆಯಲ್ಲಿ ಇದೀಗ ಹೈ ಅಲರ್ಟ್ ಸೂಚನೆ ನೀಡಲಾಗಿದೆ. ರಾಜ್ಯ ಪ್ರಕೃತಿ ವಿಕೋಪ ಮುನ್ನೆಚ್ಚರಿಕಾ ಇಲಾಖೆಯಿಂದ ಜಿಲ್ಲಾಡಳಿತಕ್ಕೆ ಈ ಬಗ್ಗೆ ಸೂಚನೆಯನ್ನು ನೀಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಾಲೀಕನ ನಿಧನಕ್ಕೆ ಬಿಕ್ಕಿ ಬಿಕ್ಕಿ ಕಣ್ಣೀರು ಹಾಕಿದ ಶ್ವಾನ; ವಿಡಿಯೋ ನೋಡಿ ಭಾವುಕರಾದ ಜನರು
ವಿದೇಶದಲ್ಲಿ ಇರುವವರಿಗೂ ಗ್ಯಾರಂಟಿ ಲಾಭ ಬಗ್ಗೆ ಸಿಎಲ್ಪೀಲಿ ಪ್ರಸ್ತಾಪ: ಸಚಿವ ಮಧು ಬಂಗಾರಪ್ಪ