
ನವದೆಹಲಿ(ಅ.1): ಪಾಕ್ ಆಕ್ರಮಿತ ಕಾಶ್ಮೀರದೊಳಗೆ ನುಗ್ಗಿ ಭಾರತದ ವಿಶೇಷ ಸೇನಾ ಪಡೆ ಸರ್ಜಿಕಲ್ ಸ್ಟ್ರೈಕ್ ನಡೆಸಿರುವುದಕ್ಕೆ ಪ್ರತಿಯಾಗಿ ಉಗ್ರ ಮಸೂದ್ ಅಜರ್ ನೇತೃತ್ವದ ಪಾಕಿಸ್ತಾನದ ಜೈಶ್ ಎ ಮೊಹಮ್ಮದ್ ಮತ್ತು ಮೌಲಾನಾ ಅಬ್ದುರ್ ರೆಹಮಾನ್ ತಂಡದವರಿಂದ ರಾಷ್ಟ್ರ ರಾಜಧಾನಿ ದಿಲ್ಲಿಗೆ ಭಯೋತ್ಪಾದಕ ದಾಳಿಯ ಬೆದರಿಕೆ ಉಂಟಾಗಿದೆ. ಪೊಲೀಸರ ಪ್ರಕಾರ ಲಷ್ಕರ್ ಎ ತಯ್ಬಾ ಅಥವಾ ಹಿಜ್ಬುಲ್ ಮುಜಾಹಿದೀನ್ ಉಗ್ರರು ದಿಲ್ಲಿ ಮೇಲೆ ಭಯೋತ್ಪಾದಕ ದಾಳಿ ನಡೆಸುವ ಸಾಧ್ಯತೆ ತೀರ ಕಡಿಮೆ ಇದೆ. ಮಸೂದ್ ಅಜರ್‌ನ ಸಮೂಹದವರು ವಾಟ್ಸಾಪ್ ಮತ್ತು ಫೇಸ್ ಬುಕ್ ಬಳಸಿಕೊಂಡು ಭಾರತೀಯ ತರುಣರನ್ನು ನೇಮಕಾತಿ ಮಾಡಿಕೊಳ್ಳಲು ಯತ್ನಿಸುತ್ತಿರುವುದು ಗೊತ್ತಾಗಿದೆ. ಹೀಗಾಗಿ ದೆಹಲಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.