ನಲಪಾಡ್ ‘ಹಾರಾಟ’ಕ್ಕೆ ಕೋರ್ಟ್ ಬ್ರೇಕ್

Published : Aug 27, 2018, 07:11 PM ISTUpdated : Sep 09, 2018, 09:51 PM IST
ನಲಪಾಡ್ ‘ಹಾರಾಟ’ಕ್ಕೆ ಕೋರ್ಟ್ ಬ್ರೇಕ್

ಸಾರಾಂಶ

ಅಮಾನುಷ ಹಲ್ಲೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಶಾಸಕ ಹ್ಯಾರೀಸ್ ಪುತ್ರ ಮೊಹಮದ್ ನಲಪಾಡ್ ಫಾರಿನ್ ಟೂರ್ ಗೆ ಕೋರ್ಟ್ ಬ್ರೇಕ್ ಹಾಕಿದೆ. ಜಾಮೀನು ಷರತ್ತು ಸಡಿಲಿಸಲು ಕೋರಿ ಸಲ್ಲಿಸಿದ್ದ ಅರ್ಜಿ ಇತ್ಯರ್ಥಪಡಿಸಿದ ಹೈಕೋರ್ಟ್ ಸೆಶನ್ ಕೋರ್ಟ್ ನಲ್ಲೆ ಅರ್ಜಿ ಸಲ್ಲಿಸಲು ತಿಳಿಸಿದೆ.

ಬೆಂಗಳೂರು[ಆ.27]  ಯುಕೆಗೆ ತೆರಳಬೇಕು ಎಂದುಕೊಂಡಿದ್ದ ಮೊಹಮದ್ ನಲಪಾಡ್ ಗೆ ಸದ್ಯಕ್ಕೆ ಫಾರಿನ್ ಟೂರ್ ಸಾಧ್ಯವಾಗುತ್ತಿಲ್ಲ. 15 ದಿನ ಲಂಡನ್ ಪ್ರವಾಸಕ್ಕೆ ಅನುಮತಿ ಕೋರಿದ್ದ  ಆಸೆಗೆ ಹೖಕೋರ್ಟ್ ತಣ್ಣೀರು ಎರಚಿದೆ.

 ಶಾಸಕ ಹ್ಯಾರಿಸ್ ಪುತ್ರ ನಲಪಾಡ್ ಸಲ್ಲಿಸಿದ್ದ ಅರ್ಜಿ ಇತ್ಯರ್ಥಪಡಿಸಿದ ಹೈಕೋರ್ಟ್ ಏಕಸದಸ್ಯ ಪೀಠ,  ಸೆಷನ್ಸ್ ನ್ಯಾಯಾಲಯಲ್ಲಿಯೇ ಅರ್ಜಿ ಸಲ್ಲಿಸುವಂತೆ ಸೂಚನೆ ನೀಡಿದೆ.  ನ್ಯಾ. ಜಾನ್ ಮೈಕೆಲ್ ಡಿ. ಕುನ್ಹಾ ವಿಚಾರಣೆ ನಡೆಸಿ ಈ ತೀರ್ಮಾನ ನೀಡಿದ್ದಾರೆ. ಫೆ. 17ರಂದು ಫರ್ಜಿ ಕೆಫೆಯಲ್ಲಿ ಉದ್ಯಮಿ ಪುತ್ರ ವಿದ್ವತ್ ಮೇಲೆ ಹಲ್ಲೆ ಮಾಡಿದ್ದ ಪ್ರಕರಣದಲ್ಲಿ ನಲಪಾಡ್ ಜೈಲು ಸೇರಿದ್ದರು.

ನನ್ನ ಸಹೋದರ ಲಂಡನ್‌ನಲ್ಲಿ ನೆಲೆಸಿದ್ದಾನೆ. ಆತನನ್ನು ಭೇಟಿ ಮಾಡುವುದಕ್ಕಾಗಿ 15 ದಿನಗಳ ಕಾಲ ಲಂಡನ್‌ಗೆ ತೆರಳಲು ಉದ್ದೇಶಿಸಿದ್ದೇನೆ. ಆದ್ದರಿಂದ ಜಾಮೀನು ಷರತ್ತು ಸಡಿಲಿಸಿ ಲಂಡನ್‌ಗೆ ತೆರಳಲು ಅವಕಾಶ ಕಲ್ಪಿಸಬೇಕು ಎಂದು ನಲಪಾಡ್ ತನ್ನ ಅರ್ಜಿಯಲ್ಲಿ ಕೋರಿದ್ದರು.

2018ರ ಫೆ.17ರಂದು ರಾತ್ರಿ ಮೊಹಮದ್ ನಲಪಾಡ್ ಹ್ಯಾರಿಸ್ ಮತ್ತು ಅವರ ಸಹಚರರು ನಗರದ ಫರ್ಜಿ ಕೆಫೆಯಲ್ಲಿ ವಿದ್ವತ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದರು. ತನಿಖೆ ನಡೆಸಿದ್ದ ಸಿಸಿಬಿ ಪೊಲೀಸರು, ವಿದ್ವತ್ ಕೊಲೆಗೆ ಯತ್ನಿಸಿದ ಆರೋಪದಲ್ಲಿ ನಲಪಾಡ್ ಅವರನ್ನು ಮೊದಲನೆ ಆರೋಪಿಯನ್ನಾಗಿಸಿ ಅಧೀನ ನ್ಯಾಯಾಲಯಕ್ಕೆ 2018ರ ಮೇ 1ರಂದು ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸದನದಲ್ಲಿ Siddaramaiah vs Arvind Bellad ಒಳಮೀಸಲು ಹೆಚ್ಚಳ ಜಟಾಪಟಿ! ಯತ್ನಾಳ್‌ಗೆ ಸಿಎಂ ಸಂವಿಧಾನ ಪಾಠ
ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!