ಉಮೇಶ್ ರೆಡ್ಡಿ ಗಲ್ಲು ಶಿಕ್ಷೆಗೆ ತಡೆ

By Web DeskFirst Published Oct 20, 2016, 6:42 PM IST
Highlights

1998ರಲ್ಲಿ ಉಮೇಶ್ ರೆಡ್ಡಿ ಬೆಂಗಳೂರಿನ ಯಲಹಂಕದಲ್ಲಿ ಜಯಶ್ರೀ ಎಂಬ ಮಹಿಳೆಯ ಕೈಯನ್ನು ಕಟ್ಟಿ ಅತ್ಯಾಚಾರ ಎಸಗಿದ್ದ, ಆ ಬಳಿಕ ಆಕೆಯನ್ನು ಕೊಂದು,ಮನೆಯಲ್ಲಿದ್ದ ಆಭರಣಗಳನ್ನು ದೋಚಿಕೊಂಡು ಪರಾರಿಯಾಗಿದ್ದ.

ಬೆಂಗಳೂರು(ಅ.21): ವಿಕೃತ ಕಾಮಿ ಉಮೇಶ್ ರೆಡ್ಡಿ ಗಲ್ಲು ಶಿಕ್ಷೆಗೆ ಹೈಕೋರ್ಟ್ ವಿಭಾಗೀಯ ಪೀಠ ಮಧ್ಯಂತರ ತಡೆಯಾಜ್ಞೆ ನೀಡಿದೆ, ಈ ಸಂಬಂಧ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಹೈಕೋರ್ಟ್ ನೊಟೀಸ್ ನೀಡಿದೆ. 1998ರಲ್ಲಿ ಉಮೇಶ್ ರೆಡ್ಡಿ ಬೆಂಗಳೂರಿನ ಯಲಹಂಕದಲ್ಲಿ ಜಯಶ್ರೀ ಎಂಬ ಮಹಿಳೆಯ ಕೈಯನ್ನು ಕಟ್ಟಿ ಅತ್ಯಾಚಾರ ಎಸಗಿದ್ದ, ಆ ಬಳಿಕ ಆಕೆಯನ್ನು ಕೊಂದು,  ಮನೆಯಲ್ಲಿದ್ದ ಆಭರಣಗಳನ್ನು ದೋಚಿಕೊಂಡು ಪರಾರಿಯಾಗಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 2009ರ ಫೆಬ್ರುವರಿ 18ರಂದು ಗಲ್ಲು ಶಿಕ್ಷೆ ವಿಧಿಸಿತ್ತು. ಆದ್ರೆ ತನಗೆ ನೀಡಿರುವ ಗಲ್ಲು ಶಿಕ್ಷೆಗೆ ತಡೆ ನೀಡಬೇಕೆಂದು ಉಮೇಶ್ ರೆಡ್ಡಿ  ರಿಟ್ ಅರ್ಜಿ ಸಲ್ಲಿಸಿದ್ದು, 10 ದಿನಗಳೊಳಗೆ ಆಕ್ಷೇಪಣಾ ಅರ್ಜಿ ಸಲ್ಲಿಸುವಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಹೈಕೋರ್ಟ್ ವಿಭಾಗಿಯ ಪೀಠ ಸೂಚಿಸಿದೆ.

click me!