ಪ್ರಜ್ವಲ್ ಸಮನ್ಸ್ ಸ್ವೀಕರಿಸದಿದ್ರೆ ಜಾಹಿರಾತು ಕೊಡಿ: ಕೋರ್ಟ್

By Kannadaprabha NewsFirst Published Sep 7, 2019, 11:47 AM IST
Highlights

ಪ್ರಜ್ವಲ್‌ಗೆ ತಲುಪದ ಸಮನ್ಸ್‌: ಹೈಕೋರ್ಟ್‌ ಕೆಂಡಾಮಂಡಲ |  ಸಂಸದ ಸ್ಥಾನದಿಂದ ಅನರ್ಹಗೊಳಿಸಲು ಕೋರಿ ಸಲ್ಲಿಕೆಯಾದ ಅರ್ಜಿ

ಬೆಂಗಳೂರು (ಸೆ. 07):  ಹೈಕೋರ್ಟ್‌ ಜಾರಿ ಮಾಡಿರುವ ಸಮನ್ಸ್‌ ಈವರೆಗೂ ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ ತಲುಪದಿರುವುದಕ್ಕೆ ಹೈಕೋರ್ಟ್‌ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಹಾಸನ ಲೋಕಸಭಾ ಕ್ಷೇತ್ರದಿಂದ ಚುನಾಯಿತರಾಗಿರುವ ಪ್ರಜ್ವಲ್‌ ರೇವಣ್ಣ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಕೋರಿ ಪರಾಜಿತ ಬಿಜೆಪಿ ಅಭ್ಯರ್ಥಿ ಎ.ಮಂಜು ಮತ್ತು ಜಿ.ದೇವರಾಜೇಗೌಡ ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿಗಳನ್ನು ನ್ಯಾಯಮೂರ್ತಿ ಜಾನ್‌ ಮೈಕೆಲ್‌ ಕುನ್ಹ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ಹಿಂದು ಕಾರ‍್ಯಕರ್ತರ ಮೇಲಿನ ಕೇಸ್‌ ರದ್ದು?

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ನ್ಯಾಯಾಲಯ ಜಾರಿ ಮಾಡಿರುವ ಸಮನ್ಸ್‌ ಪ್ರತಿವಾದಿಗಳಿಗೆ ತಲುಪಿಲ್ಲ ಎಂದು ನ್ಯಾಯಪೀಠಕ್ಕೆ ತಿಳಿಸಿದರು. ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಪೀಠ, ನ್ಯಾಯಾಲಯದಿಂದ ಸಮನ್ಸ್‌ ಜಾರಿಯಾಗಿರುವ ಸಂಬಂಧ ಪತ್ರಿಕೆಯಲ್ಲಿ ಪ್ರಕಟಣೆ ನೀಡಲು ಅರ್ಜಿದಾರರಿಗೆ ಅನುಮತಿ ನೀಡಿ ವಿಚಾರಣೆ ಮುಂದೂಡಿತು.

ಪ್ರಕರಣದ ಹಿನ್ನೆಲೆ:

ಕಳೆದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದ ಪ್ರಜ್ವಲ್‌ ರೇವಣ್ಣ, ತಮ್ಮ ಆದಾಯ ತೆರಿಗೆ ವಿವರಗಳಿಗೆ ಸಂಬಂಧಿಸಿದಂತೆ ಸಲ್ಲಿಸಿರುವ ದಾಖಲೆಗಳಲ್ಲಿ ಸುಳ್ಳು ಮಾಹಿತಿ ನೀಡಿದ್ದಾರೆ. ಆದ್ದರಿಂದ ಅವರ ಆಯ್ಕೆಯನ್ನು ಅನರ್ಹಗೊಳಿಸಬೇಕು ಎಂದು ಕೋರಿ ಅರ್ಜಿ ಸಲ್ಲಿಸಲಾಗಿತ್ತು.

click me!