ನೋಟು ಅಮಾನ್ಯ: ರಿಸರ್ವ್ ಬ್ಯಾಂಕ್ಗೆ ಹೈ ನೋಟಿಸ್

Published : Nov 30, 2016, 12:56 PM ISTUpdated : Apr 11, 2018, 12:43 PM IST
ನೋಟು ಅಮಾನ್ಯ: ರಿಸರ್ವ್ ಬ್ಯಾಂಕ್ಗೆ ಹೈ ನೋಟಿಸ್

ಸಾರಾಂಶ

ಉಡುಪಿ ಜಿಲ್ಲೆಯ ಕುಂದಾಪುರ ವ್ಯವಸಾಯ ಸೇವಾ ಸಹಕಾರ ಸಂಘ ಸೇರಿದಂತೆ ಸುಮಾರು 10 ಸಹಕಾರ ಬ್ಯಾಂಕುಗಳು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾ.ಅಶೋಕ್ ಬಿ.ಹಿಂಚಿಗೇರಿ ಅವರಿದ್ದ ಪೀಠ ನೋಟಿಸ್ ಜಾರಿ ಮಾಡಿದೆ. ಅಲ್ಲದೆ, ಈ ಕುರಿತು ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆ ಮುಂದೂಡಿದೆ.

ಬೆಂಗಳೂರು(ನ.30): 500 ಮತ್ತು 1000 ಮುಖಬೆಲೆಯ ನೋಟುಗಳ ಅಮಾನ್ಯ ಮಾಡಿರುವ ಕ್ರಮ ಪ್ರಶ್ನಿಸಿ ನಾನಾ ಸಹಕಾರಿ ಸಂಘಗಳು ಸಲ್ಲಿಸಿರುವ ಅರ್ಜಿ ಸಂಬಂಧ ಭಾರತೀಯ ರಿಸರ್ವ್ ಬ್ಯಾಂಕ್(ಆರ್‌ಬಿಐ)ಗೆ ಹೈಕೋರ್ಟ್ ಬುಧವಾರ ನೋಟಿಸ್ ಜಾರಿ ಮಾಡಿದೆ.

ಉಡುಪಿ ಜಿಲ್ಲೆಯ ಕುಂದಾಪುರ ವ್ಯವಸಾಯ ಸೇವಾ ಸಹಕಾರ ಸಂಘ ಸೇರಿದಂತೆ ಸುಮಾರು 10 ಸಹಕಾರ ಬ್ಯಾಂಕುಗಳು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾ.ಅಶೋಕ್ ಬಿ.ಹಿಂಚಿಗೇರಿ ಅವರಿದ್ದ ಪೀಠ ನೋಟಿಸ್ ಜಾರಿ ಮಾಡಿದೆ. ಅಲ್ಲದೆ, ಈ ಕುರಿತು ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆ ಮುಂದೂಡಿದೆ.

ಕೇಂದ್ರ ಸರ್ಕಾರ ಮತ್ತು ಭಾರತೀಯ ರಿಸರ್ವ್ ಬ್ಯಾಂಕ್  500 ಮತ್ತು  1000 ರು. ಮುಖಬೆಲೆಯ ನೋಟುಗಳನ್ನು ಯಾವುದೇ ಸೂಚನೆ ನೀಡದೆ ಅಮಾನ್ಯ ಮಾಡಿದೆ. ಅಲ್ಲದೆ, ಗ್ರಾಮೀಣ ಭಾಗದ ಸಹಕಾರಿ ಬ್ಯಾಂಕುಗಳಲ್ಲಿನ ರೈತರು ಹಾಗೂ ಬಡವರು ಠೇವಣಿಯಿಟ್ಟಿರುವ ಹಣದ ವಿನಿಮಯ ಮಾಡುವುದಕ್ಕೆ ಇದ್ದ ಅಕಾರವನ್ನು ಹಿಂಪಡೆದಿದೆ. ವಾಣಿಜ್ಯ ಹಾಗೂ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ಖಾತೆಗಳಿಂದ ಖಾತೆದಾರ ವಾರಕ್ಕೆ ಕೇವಲ  24 ಸಾವಿರ ರು. ಹಣ ಪಡೆದುಕೊಳ್ಳಬೇಕು ಎಂಬ ನಿಯಮ ರೂಪಿಸಿದೆ. ಇದರಿಂದಾಗಿ ಸಹಕಾರಿ ಸಂಘಗಳಲ್ಲಿ ವ್ಯವಹಾರ ಮಾಡುತ್ತಿರುವ ಲಕ್ಷಾಂತರ ರೈತರಿಗೆ ತೊಂದರೆಯಾಗಿದೆ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.

ಅಲ್ಲದೆ, ಸಹಕಾರಿ ಸಂಘಗಳು ರಾಜ್ಯ ಸರ್ಕಾರದ ಅೀನಲ್ಲಿ ಬರಲಿವೆ. ಇವುಗಳನ್ನು ನಿಯಂತ್ರಿಸುವುದಕ್ಕೆ ಕೆಂದ್ರ ಸರ್ಕಾರಕ್ಕೆ ಅಕಾರವಿಲ್ಲ. ಆದರೆ ಕೆಂದ್ರ ಈ ಆದೇಶ ಅಸಾಂವಿಧಾನಿಕವಾಗಿದ್ದು, ಸಹಕಾರ ಸಂಘಗಳು ಹಾಗೂ ಸಹಕಾರಿ ಬ್ಯಾಂಕ್‌ಗಳ ಪಾಲಿಗೆ ಮಾರಕವಾಗಿದೆ. ಆದ್ದರಿಂದ ಕೇಂದ್ರ ಸರ್ಕಾರ ಆದೇಶ ಹಿಂಪಡೆಯಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರಿಂದ ಗೋಕರ್ಣ ಹೊರಟಿದ್ದ ಬಸ್ ಅಗ್ನಿದುರಂತ: ಸುಟ್ಟು ಕರಕಲಾದ 9 ಮೃತರ ಪತ್ತೆಗೆ DNA ಮೊರೆ
ಡಿಸಿ ಹಕ್ಕುಚ್ಯುತಿ ಬಗ್ಗೆ ಸಂಸದರು ಧ್ವನಿ ಎತ್ತಲಿ: ಸಚಿವ ಸತೀಶ್‌ ಜಾರಕಿಹೊಳಿ