ಮೊದಲ ಸಲ ಹೈಕೋರ್ಟ್'ನಲ್ಲಿ 2 ಮಹಿಳಾ ಜಡ್ಜ್‌ಗಳ ಪೀಠ

Published : Sep 14, 2017, 07:48 PM ISTUpdated : Apr 11, 2018, 12:59 PM IST
ಮೊದಲ ಸಲ ಹೈಕೋರ್ಟ್'ನಲ್ಲಿ 2 ಮಹಿಳಾ ಜಡ್ಜ್‌ಗಳ ಪೀಠ

ಸಾರಾಂಶ

ರಾಜ್ಯ ಹೈಕೋರ್ಟ್ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಇಬ್ಬರು ಮಹಿಳಾ ನ್ಯಾಯಮೂರ್ತಿಗಳನ್ನು ಒಳಗೊಂಡ ವಿಭಾಗೀಯ ಪೀಠವನ್ನು ರಚನೆ ಮಾಡಲಾಗಿದೆ. ಜೈಲುಗಳಲ್ಲಿರುವ ಅಪರಾಧಿಗಳು ಸಲ್ಲಿಸಿರುವ ಕ್ರಿಮಿನಲ್ ಮೇಲ್ಮನವಿಗಳ ವಿಚಾರಣೆಗಾಗಿ ಈ ವಿಶೇಷ ವಿಭಾಗೀಯ ಪೀಠ ರಚಿಸಲಾಗಿದೆ. ಕ್ರಿಮಿನಲ್ ಮೇಲ್ಮನವಿಗಳ ತ್ವರಿತ ಇತ್ಯರ್ಥಕ್ಕೆ ವಿಶೇಷ ಪೀಠ ರಚನೆ ಮಾಡುವಂತೆ ದೇಶದ ಹೈಕೋರ್ಟ್'ಗಳಿಗೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರು ಇತ್ತೀಚೆಗೆ ನಿರ್ದೇಶನ ನೀಡಿದ್ದರು.

ಬೆಂಗಳೂರು: ರಾಜ್ಯ ಹೈಕೋರ್ಟ್ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಇಬ್ಬರು ಮಹಿಳಾ ನ್ಯಾಯಮೂರ್ತಿಗಳನ್ನು ಒಳಗೊಂಡ ವಿಭಾಗೀಯ ಪೀಠವನ್ನು ರಚನೆ ಮಾಡಲಾಗಿದೆ.

ಜೈಲುಗಳಲ್ಲಿರುವ ಅಪರಾಧಿಗಳು ಸಲ್ಲಿಸಿರುವ ಕ್ರಿಮಿನಲ್ ಮೇಲ್ಮನವಿಗಳ ವಿಚಾರಣೆಗಾಗಿ ಈ ವಿಶೇಷ ವಿಭಾಗೀಯ ಪೀಠ ರಚಿಸಲಾಗಿದೆ. ಕ್ರಿಮಿನಲ್ ಮೇಲ್ಮನವಿಗಳ ತ್ವರಿತ ಇತ್ಯರ್ಥಕ್ಕೆ ವಿಶೇಷ ಪೀಠ ರಚನೆ ಮಾಡುವಂತೆ ದೇಶದ ಹೈಕೋರ್ಟ್'ಗಳಿಗೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರು ಇತ್ತೀಚೆಗೆ ನಿರ್ದೇಶನ ನೀಡಿದ್ದರು.

ಅದರಂತೆ ನ್ಯಾಯಮೂರ್ತಿ ರತ್ನಕಲಾ ಮತ್ತು ನ್ಯಾಯಮೂರ್ತಿ ಕೆ.ಎಸ್.ಮುದಗಲ್ ಅವರನ್ನು ಒಳಗೊಂಡ ವಿಶೇಷ ವಿಭಾಗೀಯ ಪೀಠ ರಚನೆ ಮಾಡಲಾಗಿದೆ. ಹೈಕೋರ್ಟ್ ಇತಿಹಾಸದಲ್ಲಿ ಇಬ್ಬರು ಮಹಿಳಾ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ರಚನೆಯಾದ ಮೊದಲ ವಿಭಾಗೀಯ ಪೀಠ ಇದಾಗಿದೆ  ಎನ್ನಲಾಗಿದೆ.

ಈ ನ್ಯಾಯಪೀಠವು ಸೆ.16ರಂದು (ಶನಿವಾರ) ಕೋರ್ಟ್ ಹಾಲ್ 14ರಲ್ಲಿ ಬೆಳಗ್ಗೆ 10.30ಗೆ ವಿಶೇಷ ಕಲಾಪ ನಡೆಸಲಿದೆ. ಈ ವಿಭಾಗೀಯ ಪೀಠದ ಮುಂದೆ ಒಟ್ಟು 30 ಕ್ರಿಮಿನಲ್ ಮೇಲ್ಮನವಿಗಳು ವಿಚಾರಣೆಗೆ ನಿಗದಿಯಾಗಿದೆ. ಈ ಎಲ್ಲ ಮೇಲ್ಮನವಿಗಳು 2012ನೇ ಸಾಲಿನಲ್ಲಿ ದಾಖಲಾಗಿದ್ದು, ಇವುಗಳಲ್ಲಿ ರಾಜ್ಯ ಸರ್ಕಾರ ಕಾನೂನು ನೆರವು ನೀಡಲಾಗುತ್ತಿದೆ.

ರಾಜ್ಯ ಹೈಕೋರ್ಟ್‌ಗೆ ಈವರೆಗೂ ಕೇವಲ 6 ಮಂದಿ ಮಹಿಳಾ ನ್ಯಾಯಮೂರ್ತಿಗಳು ನೇಮಕಗೊಂಡಿದ್ದಾರೆ. ಅವರಲ್ಲಿ ಮೊದಲಿಗರು ನ್ಯಾ. ಮಂಜುಳಾ ಚೆಲ್ಲೂರ್. 2000ರಲ್ಲಿ ಹೈಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡ ಅವರು 2011ರಲ್ಲಿ ಕೇರಳ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಬಡ್ತಿ ಪಡೆದಿದ್ದರು. ಸದ್ಯ ಬಾಂಬೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ತದನಂತರ ಬಿ.ವಿ.ನಾಗರತ್ನ, ಬಿ.ಎಸ್.ಇಂದ್ರಕಲಾ, ರತ್ನಕಲಾ, ಎಸ್.ಸುಜಾತ ಮತ್ತು ಕೆ.ಎಸ್.ಮುದಗಲ್ ಅವರು ಕ್ರಮವಾಗಿ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ನೇಮಕಗೊಂಡಿದ್ದರು. ನ್ಯಾಯಮೂರ್ತಿ ಬಿ.ಎಸ್.ಇಂದ್ರಕಲಾ ಅವರು 2014ರಲ್ಲಿ ಸೇವೆಯಿಂದ ನಿವೃತ್ತಿಯಾಗಿದ್ದರು. ಸದ್ಯ ಕರ್ನಾಟಕ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾಗಿದ್ದಾರೆ ಎಂದು ಹೈಕೋರ್ಟ್ ವಕೀಲ ಗಂಗಾಧರ ಸಂಗೊಳ್ಳಿಯವರು ತಿಳಿಸಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೈಸೂರು ಏಕತಾ ಮಹಲ್‌ ವಿವಾದ, ತಾಯಿ-ಮಗನ ವೈರುಧ್ಯ ನಡೆ, ಕೋರ್ಟ್ ಮೆಟ್ಟಲೇರಿದ ರಾಜಮಾತೆ ಪ್ರಮೋದಾದೇವಿ!
ವಿಮಾನದ ಬಾಲಕ್ಕೆ ಪ್ಯಾರಾಚೂಟ್ ಸಿಲುಕಿ15,000 ಅಡಿ ಎತ್ತರದಲ್ಲಿ ನೇತಾಡಿದ ಸ್ಕೈಡೈವರ್ ಬದುಕುಳಿದಿದ್ದು ಹೇಗೆ? ವೀಡಿಯೋ