
ಬೆಂಗಳೂರು (ಡಿ.28): ಹಿಂದೂ ದೇವತೆಗಳ ವಿರುದ್ಧ ಫೇಸ್ ಬುಕ್ ನಲ್ಲಿ ಹಾರೋಹಳ್ಳಿ ರವೀಂದ್ರ ಎನ್ನುವವರು ಅವಹೇಳನಕಾರಿಕಾಗಿ ಪೋಸ್ಟ್ ಮಾಡಿದ್ದು ಅವರ ವಿರುದ್ಧ ದೂರು ನೀಡಲಾಗಿದೆ.
ಕೇಂದ್ರ ಸಚಿವ ಅನಂತ್'ಕುಮಾರ್ ಹೆಗಡೆ ನಿಂದಿಸೋ ಭರದಲ್ಲಿ ಹಿಂದೂ ದೇವತೆಗಳಿಗೆ ಅವಮಾನ ಮಾಡಿದ್ದಾರೆ. ದೇವರುಗಳ ಲೈಂಗಿಕ ಕ್ರಿಯೆ ಬಗ್ಗೆ ಫೇಸ್'ಬುಕ್'ನಲ್ಲಿ ನಿಂದನೆ ಮಾಡಿದ್ದಾರೆ. ಸೀತಾಮಾತೆಗೆ ಲಕ್ಷ್ಮಣನ ಜೊತೆ ಅನೈತಿಕ ಸಂಬಂಧ ಇತ್ತು. ಸೀತೆ ತಾನಾಗಿಯೇ ರಾವಣನ ಬಳಿ ಲೈಂಗಿಕ ಸುಖಕ್ಕಾಗಿ ಹೋಗಿದ್ದಳು ಎಂದು ಪೋಸ್ಟ್ ಮಾಡಿದ್ದು, ಇದಕ್ಕೆ ಜಾಲತಾಣಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೈಸೂರಿನ ವಿವಿಯಲ್ಲಿ ಪಿಎಚ್‌ಡಿ ವಿದ್ಯಾರ್ಥಿಯಾಗಿರೋ ರವೀಂದ್ರ ಮೈಸೂರು ವಿವಿಯ ಪ್ರೋ.ಮಹೇಶ್'ಚಂದ್ರ ಗುರು ಮಾರ್ಗದರ್ಶನದಲ್ಲಿ ಪಿಎಚ್‌ಡಿ ಸಂಶೋಧನೆ ಮಾಡುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.