ಖಾದರ್ ವಿರುದ್ಧ ಅವಹೇಳನಕಾರಿ ಹೇಳಿಕೆ; ಹಿಂದೂ ಜಾಗರಣಾ ವೇದಿಕೆ ಮುಖಂಡ ಜಗದೀಶ್ ಕಾರಂತ್ ಬಂಧನ

Published : Sep 29, 2017, 10:26 PM ISTUpdated : Apr 11, 2018, 12:57 PM IST
ಖಾದರ್ ವಿರುದ್ಧ ಅವಹೇಳನಕಾರಿ ಹೇಳಿಕೆ; ಹಿಂದೂ ಜಾಗರಣಾ ವೇದಿಕೆ ಮುಖಂಡ ಜಗದೀಶ್ ಕಾರಂತ್ ಬಂಧನ

ಸಾರಾಂಶ

ಪುತ್ತೂರು ಠಾಣೆ ಇನ್ಸ್​ಪೆಕ್ಟರ್​ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣ ಸಂಬಂಧ ಹಿಂದೂ ಜಾಗರಣಾ ವೇದಿಕೆ ರಾಜ್ಯ ಸಂಚಾಲಕ ಜಗದೀಶ್ ಕಾರಂತರನ್ನು ಇಂದು ಬಂಧಿಸಲಾಗಿದೆ.

ಬೆಂಗಳೂರು (ಸೆ.29): ಪುತ್ತೂರು ಠಾಣೆ ಇನ್ಸ್​ಪೆಕ್ಟರ್​ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣ ಸಂಬಂಧ ಹಿಂದೂ ಜಾಗರಣಾ ವೇದಿಕೆ ರಾಜ್ಯ ಸಂಚಾಲಕ ಜಗದೀಶ್ ಕಾರಂತರನ್ನು ಇಂದು ಬಂಧಿಸಲಾಗಿದೆ.

ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ನಡೆದಿದ್ದ ಪ್ರತಿಭಟನೆಯಲ್ಲಿ ಗ್ರಾಮಾಂತರ ಠಾಣೆಯ ಇನ್ಸ್​ಪೆಕ್ಟರ್ ಖಾದರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಹಿನ್ನೆಲೆ ಜಾಮೀನು ರಹಿತ ಕೇಸ್​ ದಾಖಲಿಸಲಾಗಿತ್ತು. ಈ ಹಿನ್ನೆಲೆ ಇವತ್ತು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದ್ದು, ಪುತ್ತೂರು ಪೊಲೀಸರು ಜಗದೀಶ್​ ಕಾರಂತ್ ಅವರನ್ನು ವಶಕ್ಕೆ ಪಡೆದಿದ್ದಾರೆ.  ಬಂಧನದ ನಂತ್ರ ಕೆಲ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಹಿನ್ನೆಲೆ ಪುತ್ತೂರು ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್​ ಮಾಡಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
ಜಾಗತಿಕ ಶಾಂತಿ-ಸೌಹಾರ್ದತೆಗೆ ಧ್ಯಾನವೇ ಮಾರ್ಗ: ವಿಶ್ವಸಂಸ್ಥೆಯಲ್ಲಿ ರವಿಶಂಕರ್ ಗುರೂಜಿ ಸಂದೇಶ