
ಕಲಬುರಗಿ: ಜಾತಿವಾದಿ ಪಟ್ಟಭದ್ರ ಹಿತಾಸಕ್ತಿಗಳ ದಬ್ಬಾಳಿಕೆಗೆ ಬೇಸತ್ತು ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಕೊಂಡಗುಳಿ ಗ್ರಾಮದ 58 ಕುಟುಂಬಗಳ ಸದಸ್ಯರು ಫೆ.28ರಂದು ಸಾಮೂಹಿಕವಾಗಿ ಬೌದ್ಧಧರ್ಮಕ್ಕೆ ಮತಾಂತರಗೊಳ್ಳುತ್ತಿದ್ದಾರೆ.
ಈ ಕುರಿತು ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ದಲಿತ ಸೇನೆ ರಾಜ್ಯಾಧ್ಯಕ್ಷ ಡಾ.ವಿಠ್ಠಲ ದೊಡ್ಡಮನಿ ಅವರು, ಇದೇ ತಿಂಗಳು ದ್ಯಾವಮ್ಮ ಜಾತ್ರೆಯಲ್ಲಿ ತೇರು ಎಳೆಯುವುದು ಹಾಗೂ ಹರಕೆ ತೀರಿಸುವುದಕ್ಕೆ ಸಂಬಂಧಿಸಿದಂತೆ ದಲಿತರ ಮತ್ತು ಸವರ್ಣಿಯ ನಡುವೆ ಮಾರಾಮಾರಿಯಾಗಿ ಸುಮಾರು ಏಳು ಜನ ದಲಿತರು ಹಾಗೂ ಕೆಲ ಸವರ್ಣಿಯರು ಗಾಯಗೊಂಡಿದ್ದರು.
ಹೆಚ್ಚಿನ ಸಂಖ್ಯೆಯಲ್ಲಿರುವ ಸವರ್ಣಿಯರು, ದಲಿತರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದರು. ಗ್ರಾಮದಲ್ಲಿ ಈಗಲೂ ದಲಿತರು ಸ್ವಾಭಿಮಾನದಿಂದ ಬದುಕಲು ಆಗುತ್ತಿಲ್ಲ. ಹೀಗಾಗಿ, ಮತಾಂತರಗೊಳ್ಳುತ್ತಿದ್ದೇವೆ. ಅಂದು ಮಹಾರಾಷ್ಟ್ರ, ಆಂಧ್ರಪ್ರದೇಶ, ತಮಿಳುನಾಡಿನಿಂದ ಬೌದ್ಧ ಭಿಕ್ಷುಗಳು ಆಗಮಿಸಿ ಮತಾಂತರ ಕಾರ್ಯ ನೆರವೇರಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.