ಮಧು ಬಂಗಾರಪ್ಪ, ನಿಖಿಲ್ ಗೆ JDS ಮಹತ್ವದ ಹುದ್ದೆ : ಪದಾಧಿಕಾರಿಗಳ ಫುಲ್ ಲಿಸ್ಟ್

Published : Jul 04, 2019, 01:41 PM ISTUpdated : Jul 04, 2019, 04:10 PM IST
ಮಧು ಬಂಗಾರಪ್ಪ, ನಿಖಿಲ್ ಗೆ JDS ಮಹತ್ವದ ಹುದ್ದೆ : ಪದಾಧಿಕಾರಿಗಳ ಫುಲ್ ಲಿಸ್ಟ್

ಸಾರಾಂಶ

ಲೋಕಸಭಾ ಚುನಾವಣೆಯಲ್ಲಿ ಪರಾಭವಗೊಂಡಿದ್ದ ನಿಖಿಲ್ ಕುಮಾರಸ್ವಾಮಿ ಹಾಗೂ ಮಧು ಬಂಗಾರಪ್ಪಗೆ ಜೆಡಿಎಸ್ ನಾಯಕರು ಮಹತ್ವದ ಜವಾಬ್ದಾರಿ ವಹಿಸಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಎಚ್.ಕೆ ಕುಮಾರಸ್ವಾಮಿ ನೇಮಕವಾಗಿದೆ. 

ಬೆಂಗಳೂರು [ಜು.04] :  ಎಚ್‌.ವಿಶ್ವನಾಥ್‌ ರಾಜೀನಾಮೆ ನೀಡಿದ ರಾಜ್ಯಾಧ್ಯಕ್ಷ ಹುದ್ದೆಗೆ ಸಕಲೇಶಪುರದ ಶಾಸಕ ಹಾಗೂ ದಲಿತ ಮುಖಂಡ ಎಚ್‌.ಕೆ. ಕುಮಾರಸ್ವಾಮಿ ಅವರನ್ನು ಆಯ್ಕೆ ಮಾಡಲಾಗಿದೆ. 

"

ಪಕ್ಷದ ಪರಿಶಿಷ್ಟವರ್ಗಕ್ಕೆ ಸೇರಿದ ನಾಯಕರಿಗೆ ಸೂಕ್ತ ಸ್ಥಾನ-ಮಾನ ನೀಡಿಲ್ಲ ಎಂಬ ಕೊರಗು ಇದ್ದು, ಅವರಿಗೆ ಮನ್ನಣೆ ನೀಡಲಾಗುವುದು ಎಂದು ಇತ್ತೀಚೆಗಷ್ಟೇ ದೇವೇಗೌಡರು ಹೇಳಿಕೆ ನೀಡಿದ್ದರು. ಅದರಂತೆ ಆರು ಬಾರಿ ಶಾಸಕರಾಗಿರುವ ಎಚ್‌.ಕೆ.ಕುಮಾರಸ್ವಾಮಿಗೆ ಅಧ್ಯಕ್ಷ ಸ್ಥಾನ ನೀಡಲಾಗಿದೆ. 

 ಅಂತೆಯೇ ಪಕ್ಷದ ಯುವ ಘಟಕ ಅಧ್ಯಕ್ಷ ಮಧುಬಂಗಾರಪ್ಪ ಅವರಿಗೆ ಕಾರ್ಯಾಧ್ಯಕ್ಷ ಹುದ್ದೆ ನೀಡಲಾಗಿದೆ.  ಅಲ್ಲದೇ ನಿಖಿಲ್ ಕುಮಾರಸ್ವಾಮಿಗೆ ಕರ್ನಾಟಕ ಪ್ರದೇಶ ಯುವಜನತಾದಳ ಅಧ್ಯಕ್ಷ ಸ್ಥಾನ ನೀಡಲಾಗಿದೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಮಧು ಬಂಗಾರಪ್ಪ ಹಾಗೂ ಮಂಡ್ಯ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದ ನಿಖಿಲ್ ಇಬ್ಬರೂ ಚುನಾವಣೆಯಲ್ಲಿ ಪರಾಭವಗೊಂಡಿದ್ದು, ಇದೀಗ ಮಹತ್ವದ ಜವಾಬ್ದಾರಿ ವಹಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೇಂದ್ರದ ಒಪ್ಪಿಗೆ ಸಿಕ್ರೆ ಕೃಷ್ಣ ಮೇಲ್ದಂಡೆ 3ನೇ ಹಂತದ ಪೂರ್ಣಕ್ಕೆ ಬದ್ಧ: ಡಿ.ಕೆ.ಶಿವಕುಮಾರ್‌
Dhurandhar Review: ಹಿಂದೂಗಳಿಗೆ ಪ್ರಥಮ ಶತ್ರು ಹಿಂದೂ-ಮೊಬೈಲ್‌ ಕೂಡ ನೋಡದಂತೆ ಮಾಡೋ Ranveer Singh ಸಿನಿಮಾ!