
ಬೆಂಗಳೂರು: ಸಚಿವ ಸ್ಥಾನ ದೊರೆಯದ ಬಗ್ಗೆ ಅಸಮಾಧಾನಗೊಂಡಿರುವ ಗದಗ ಶಾಸಕ ಎಚ್. ಕೆ.ಪಾಟೀಲ್ ಅವರು ಸೋಮವಾರ ದೆಹಲಿಯಲ್ಲಿ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಹಾಲಿ ಸಚಿವ ಸಂಪುಟದಲ್ಲಿ ದಕ್ಷಿಣ ಕರ್ನಾಟಕದ ಶಾಸಕರಿಗೆ ಹೆಚ್ಚಿನ ಸಚಿವ ಸ್ಥಾನ ನೀಡಲಾಗಿದೆ.
ಈ ಮೂಲಕ ಉತ್ತರ ಕರ್ನಾಟಕಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಲಾಗಿಲ್ಲ. ಈ ಅನ್ಯಾಯವನ್ನು ಸರಿಪಡಿಸಬೇಕು ಎಂದು ರಾಹುಲ್ ಅವರಿಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ರಾಹುಲ್ ಗಾಂಧಿ ಭೇಟಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಾದೇಶಿಕ ಅಸಮತೋಲನ ಸರಪಡಿಸುವಂತೆ ನಾನು ರಾಹುಲ್ ಗಾಂಧಿ ಅವರಿಗೆ ಮನವಿ ಮಾಡಿದ್ದೇನೆ. ವೈಯಕ್ತಿಕವಾಗಿ ನನಗೆ ಸಚಿವ ಸ್ಥಾನ ನೀಡುವಂತೆ ಕೋರಿಲ್ಲ ಎಂದು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.