ಗದಗ [ಜು.26] : ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಗೆ ಮುಂದಾಗಿದೆ. ಇದೇ ವೇಳೆ ರಚನೆಗೆ ಅವಕಾಶ ನೀಡಿದ್ದ ರಾಜ್ಯಪಾಲರ ಕ್ರಮಕ್ಕೆ ಕಾಂಗ್ರೆಸ್ ನಾಯಕರು ಅಸಮಾಧಾನ ಹೊರಹಾಕಿದ್ದಾರೆ.
ಗದಗದಲ್ಲಿ ಶಾಸಕ ಎಚ್ ಕೆ ಪಾಟೀಲ್ ಅಸಮಾಧಾನ ಹೊರಹಾಕಿದ್ದು, ರಾಜ್ಯಪಾಲರು ತಮ್ಮ ಕರ್ತವ್ಯಗಳನ್ನು ನಿಯಮಗಳ ಚೌಕಟ್ಟಿನಲ್ಲಿಯೇ ಕೆಲಸ ಮಾಡಬೇಕು. ರಾಜಭವನ ದುರುಪಯೋಗ ಮಾಡಿಕೊಂಡು ಶಾ ಮತ್ತು ಯಡಿಯೂರಪ್ಪ ಬಹುಮತ ಇಲ್ಲದಿದ್ದರೂ ಸರಕಾರ ರಚನೆ ಮಾಡಲು ಮುಂದಾಗಿದ್ದಾರೆ ಮುಂದಾಗಿದ್ದಾರೆ ಎಂದರು.
ರಾಜ್ಯ ರಾಜಕೀಯ ವಿಚಾರವಾಗಿ ಪ್ರಕರಣವೊಂದು ಇನ್ನೂ ಸುಪ್ರಿಂ ಕೋರ್ಟ್ ನಲ್ಲಿದೆ. ಇದರ ನಡುವಲ್ಲೇ ಬಹುಮತ ಸಾಬೀತು ಮಾಡಲು ಅವಕಾಶ ಹೇಗೆ ಕೊಟ್ಟರು ಎಂದು ಪ್ರಶ್ನೆ ಮಾಡಿದ್ದಾರೆ.
ಸರ್ಕಾರ ರಚನೆ ಮಾಡಲು 111 ಸಂಖ್ಯಾಬಲ ಹೊಂದಿರುವುದು ಅವಶ್ಯಕ. ಬೆಂಬಲದ ಅಂಕಿ ಸಾಬೀತು ಪಡಿಸದೇ ರಾಜ್ಯಪಾಲರು ಪ್ರಮಾಣ ವಚನ ಬೋಧಿಸಲು ಕೈಗೊಂಡ ನಿರ್ಧಾರ ಸಂವಿಧಾನಕ್ಕೆ ಮಾಡಿದ ಅಪಚಾರ ಎಂದು ಪಾಟೀಲ್ ಹೇಳಿದರು.
ರಾಜ್ಯದಲ್ಲಿ ಕಾಂಗ್ರೆಸ್‌ಗೆ ಮತ್ತೆ ಸರ್ಕಾರ ರಚನೆಯ ಅವಕಾಶ?
ಸಂವಿಧಾನ ಉಲ್ಲಂಘನೆ ಮಾಡುವ ಈ ಕ್ರಮ ರಾಜ್ಯಪಾಲರಿಂದ ಆಗಿರುವುದು ಅತ್ಯಂತ ದುರ್ದೈವ ಮತ್ತು ಖಂಡನೀಯ. ಈ ರೀತಿ ಅಪಚಾರ ಮಾಡುವುದರಿಂದ ಬಿಜೆಪಿ ಜನರ ಆಕ್ರೋಶಕ್ಕೆ ಒಳಗಾಗಬೇಕಾಗುತ್ತದೆ. ರಾಜ್ಯಪಾಲರು ತಮ್ಮ ನಿರ್ಧಾರದ ಬಗ್ಗೆ ವಿವರಣೆ ನೀಡಲಿ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.