
ಬೆಂಗಳೂರು, [ನ.12]: ಅನಂತಕುಮಾರ್ ನಿಧನ ಹಿನ್ನೆಲೆಯಲ್ಲಿ ಇಂದು [ಸೋಮವಾರ] ಕರ್ನಾಟಕದಾದ್ಯಂತ ಶಾಲಾ-ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ.
Live Updates: ಕೇಂದ್ರ ಸಚಿವ ಅನಂತ ಕುಮಾರ್ ಇನ್ನಿಲ್ಲ
ಇಂದು ಸರ್ಕಾರಿ ರಜೆ ಘೋಷಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರಿ ಶಾಲಾ-ಕಾಲೇಜುಗಳು ಹಾಗೂ ಸರ್ಕಾರಿ ಕಚೇರಿಗಳಿಗೆ ರಜೆ ಇರಲಿದೆ. ಇಂದಿನಿಂದ ಬುಧವಾರದವರೆಗೂ 3 ದಿನಗಳ ಕಾಲ ಶೋಕಾಚರಣೆ.
ಯಾವುದೇ ಅಧಿಕೃತ ಸಾರ್ವಜನಿಕ ಸಮಾರಂಭಗಳು ಇರುವುದಿಲ್ಲ. ಯಾವುದೇ ರೀತಿಯ ಅಧಿಕೃತ ಮನರಂಜನಾ ಕಾರ್ಯಕ್ರಮ ನಡೆಸುವಂತಿಲ್ಲ. ಸರ್ಕಾರಿ ಕಟ್ಟಡಗಳ ಮೇಲೆ ಅರ್ಧ ಮಟ್ಟಕ್ಕೆ ರಾಷ್ಟ್ರಧ್ವಜ ಹಾರಾಟ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.
ಅಗಲಿದ ಕೇಂದ್ರ ಸಚಿವ ಅನಂತಕುಮಾರ್ ಸಂಕ್ಷಿಪ್ತ ಪರಿಚಯ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.