
ಪಾಟ್ನಾ : ಮನೆ ಇಲ್ಲದವರು ಮನೆ ನಿರ್ಮಾಣ ಮಾಡಿಕೊಳ್ಳಲು ಭೂಮಿ ಖರೀದಿಗಾಗಿ ಸರ್ಕಾರದಿಂದ 60 ಸಾವಿರ ಹಣವನ್ನು ನೀಡಲಾಗುವುದು ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ.
ಅಲ್ಲದೇ ಈ ಭೂಮಿಯಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿಯಲ್ಲಿ 1.2 ಲಕ್ಷ ವೆಚ್ಚದಲ್ಲಿ ಮನೆ ನಿರ್ಮಾಣ ಮಾಡಿಕೊಡಲಾಗುವುದು ಎಂದು ಹೇಳಿದ್ದಾರೆ.
ಹೊಸ ಯೋಜನೆಯ ಅಡಿಯಲ್ಲಿ ಭೂಮಿಯನ್ನು ರಿಜಿಸ್ಟರ್ ಮಾಡಿಕೊಳ್ಳುವ ಪ್ರಕ್ರಿಯೆ ಸಂಪೂರ್ಣ ಉಚಿತವಾಗಿರುತ್ತದೆ. ಈ ಯೋಜನೆಯನ್ನು ಸಿಎಂ ಗ್ರಾಮೀಣ ಆವಾಸ್ ಯೋಜನೆಗೆ ಸೇರ್ಪಡೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ನಿತೀಶ್ ಹೇಳಿದರು.
ಈಗಾಗಲೇ ರಾಜ್ಯದಲ್ಲಿ ಈ ಯೋಜನೆಗಳನ್ನು ಜಾರಿಗೆ ತರಲು ಗ್ರಾಮೀಣ ಅಭಿವೃದ್ಧಿ ಪ್ರಾಧಿಕಾರ ಕಾರ್ಯನಿರತವಾಗಿದೆ ಎಂದು ಅವರು ತಿಳಿಸಿದ್ದಾರೆ. ಗಾಂಧಿ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ವಿಚಾರವನ್ನು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.