
ಮೈಸೂರು (ಡಿ.01): ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಮೈಸೂರು ಮಕ್ಕಳ ಮಾರಾಟ ಪ್ರಕರಣದ ಕೇಂದ್ರಬಿಂದುವಾಗಿದ್ದ ನಸೀಮಾ ಆಸ್ಪತ್ರೆಗೆ ಮೈಸೂರು ಪೊಲೀಸರು ಬೀಗಮುದ್ರೆ ಹಾಕಿದ್ದಾರೆ.
ಇನ್ನೂ ಇದೇ ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತೊಂದು ಅರವಿಂದ ಆಸ್ಪತ್ರೆಗೆ ಕೂಡ ನೋಟಿಸ್ ನೀಡಿಲಾಗಿದೆ ಎಂದು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಚೆನ್ನಣ್ಣನವರ್ ಹೇಳಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ಈವರೆಗೆ 11 ಮಂದಿಯನ್ನು ಬಂಧಿಸಲಾಗಿದ್ದು, 16 ಮಕ್ಕಳನ್ನು ರಕ್ಷಣೆ ಮಾಡಲಾಗಿದೆ ಅಂತಾ ಹೇಳಿದ್ದಾರೆ. ಪ್ರಕರಣದಲ್ಲಿ ಇನ್ನೂ 2 ಮಕ್ಕಳನ್ನು ರಕ್ಷಣೆ ಮಾಡುವ ಅಗತ್ಯಯಿದ್ದು, ಕಿಂಗ್ಪಿನ್ ಉಷಾ ಸಹೋದರಿ ಸಿರಿನ್ ಯುಎಸ್ಎ’ನಲ್ಲಿ ಒಂದು ಮಗುವನ್ನು ಇಟ್ಟುಕೊಂಡಿದ್ದು, ಮತ್ತೊಂದು ಮಗು ಮೈಸೂರಿನಲ್ಲಿ ಉಳಿದುಕೊಂಡಿದೆ.
ಈ ಎರಡೂ ಮಕ್ಕಳನ್ನು ಆದಷ್ಟು ಬೇಗ ತರಿಸಲಾಗುವುದು ಎಂದರು. ಮಕ್ಕಳ ಮಾರಾಟ ಜಾಲದ ಬಗ್ಗೆ ಸುವರ್ಣನ್ಯೂಸ್ ವಿಸ್ತೃತ ವರದಿ ಪ್ರಸಾರ ಮಾಡಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.