
ಶಿವಮೊಗ್ಗ(ಸೆ.11): ಹಣದಾಸೆ ತೋರಿಸಿ ಬಡ ಹಾಸ್ಟೆಲ್ ವಿದ್ಯಾರ್ಥಿನಿಯರ ಜೀವನ ಜೊತೆ ಚೆಲ್ಲಾಟವಾಡ್ತಿದ್ದ ಹಾಸ್ಟಲ್ ವಾರ್ಡನ್ ಪೊಲೀಸರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ.
ಹಾಸ್ಟೆಲ್ ಒಂದರಲ್ಲಿ ವಾರ್ಡ್ನ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಪವಿತ್ರಾನಂದ ರಾಜ ಸದ್ಯ ಪೊಲೀಸರ ಅತಿಥಿಯಾಗಿದ್ದಾನೆ. ಈತ ಹಣದಾಸೆ ತೋರಿಸಿ ಮಗಳ ವಯಸ್ಸಿನ ವಿದ್ಯಾರ್ಥಿನಿಯರನ್ನು ಬಲವಂತವಾಗಿ ತನ್ನ ಕಾಮದಾಹಕ್ಕೆ ಬಳಸಿಕೊಳ್ಳುತ್ತಿದ್ದ ಎನ್ನಲಾಗಿದೆ.
ನಿನ್ನೆ ಕೂಡ ಚಕ್ಕಂದವಾಡಲು ನಗರದ ಹೋಟೆಲ್ ವೊಂದರಲ್ಲಿ ರೂಮ್ ಬುಕ್ ಮಾಡಿದ್ದಾನೆ ಎನ್ನಲಾಗಿದೆ. ಬಳಿಕ ಯುವತಿಯನ್ನು ಹೊಟೇಲ್‌ಗೆ ಕರೆದೊಯ್ಯುವಾಗ ಅನುಮಾನಗೊಂಡ ಸ್ಥಳೀಯರು ಪೋಲಿಸರಿಗೆ ಸುದ್ದಿ ಮುಟ್ಟಿಸಿದ್ದಾರೆ.
ಬಳಿಕ ಶಿವಮೊಗ್ಗದ ಓಬವ್ವ ಪಡೆಯ ಮುಖ್ಯಸ್ಥೆ ಮತ್ತು ಮಹಿಳಾ ಠಾಣೆ ಪಿಎಸ್ ಐ ಅನಿತಾ ತಕ್ಷಣವೇ ಹೋಟೆಲ್ ಮೇಲೆ ದಾಳಿ ನಡೆಸಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.