ಇಂದು ಮೈಸೂರಿನಲ್ಲಿ ಸಾರ್ವಜನಿಕ ದರ್ಶನ; ಬುಧವಾರ ಹುಟ್ಟೂರಿನಲ್ಲಿ ಅಂತ್ಯಸಂಸ್ಕಾರ

By Suvarna Web DeskFirst Published Jan 3, 2017, 8:37 AM IST
Highlights

ವೀರಶೈವ ಸಂಪ್ರದಾಯದ ಪ್ರಕಾರ ಅಂತಿಮ ವಿಧಿವಿಧಾನಗಳು ನೆರವೇರಲಿವೆ ಎಂದು ಮಹದೇವ ಪ್ರಸಾದ್ ಅವರ ಪುತ್ರ ಗಣೇಶ್ ಪ್ರಸಾದ್ ಮಾಹಿತಿ ನೀಡಿದ್ದಾರೆ.

ಬೆಂಗಳೂರು(ಜ. 03): ಇಂದು ಚಿಕ್ಕಮಗಳೂರಿನಲ್ಲಿ ವಿಧಿವಶರಾದ ಹೆಚ್.ಎಸ್.ಮಹದೇವ ಪ್ರಸಾದ್ ಅವರ ಪಾರ್ಥಿವ ಶರೀರವನ್ನು ಮೈಸೂರಿಗೆ ಕರೆತರಲಾಗುತ್ತಿದೆ. ಇಂದು ಮಧ್ಯಾಹ್ನದ ನಂತರ ಮೈಸೂರಿನ ಜಿಲ್ಲಾ ಕಾಂಗ್ರೆಸ್ ಕಚೇರಿ ಹಾಗೂ ಕುವೆಂಪು ನಗರದಲ್ಲಿರನ ಅವರ ಸ್ವಗೃಹದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಂಜೆ ಗುಂಡ್ಲುಪೇಟೆಯಲ್ಲಿರುವ ಅವರ ಹುಟ್ಟೂರು ಹಾಲಹಳ್ಳಿಗೆ ಪಾರ್ಥಿವ ಶರೀರವನ್ನು ಕರೆದೊಯ್ಯಲಾಗುತ್ತದೆ. ನಾಳೆ, ಸ್ವಗ್ರಾಮದಲ್ಲಿರುವ ಅವರ ತಂದೆಯ ಸಮಾಧಿ ಬಳಿಯೇ ಮಹದೇವ ಪ್ರಸಾದ್ ಅವರ ಅಂತ್ಯಸಂಸ್ಕಾರ ನಡೆಯಲಿದೆ. ವೀರಶೈವ ಸಂಪ್ರದಾಯದ ಪ್ರಕಾರ ಅಂತಿಮ ವಿಧಿವಿಧಾನಗಳು ನೆರವೇರಲಿವೆ ಎಂದು ಮಹದೇವ ಪ್ರಸಾದ್ ಅವರ ಪುತ್ರ ಗಣೇಶ್ ಪ್ರಸಾದ್ ಮಾಹಿತಿ ನೀಡಿದ್ದಾರೆ.

ಸಹಕಾರಿ ಸಚಿವ ಹೆಚ್.ಎಸ್.ಮಹದೇವ ಪ್ರಸಾದ್ ಅವರು ಇಂದು ಬೆಳಗ್ಗೆ ಚಿಕ್ಕಮಗಳೂರಿನ ಕೊಪ್ಪ ಸಮೀಪದ ಸೆರಾಯ್ ಎಂಬ ರೆಸಾರ್ಟ್'ನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. 58 ವರ್ಷದ ಅವರು ಪತ್ನಿ ಗೀತಾ ಹಾಗೂ ಪುತ್ರ ಗಣೇಶ್ ಪ್ರಸಾದ್ ಅವರನ್ನು ಅಗಲಿದ್ದಾರೆ. ಮಹದೇವ ಪ್ರಸಾದ್ ನಿಧನಕ್ಕೆ ರಾಜ್ಯದ ಗಣ್ಯರನೇಕರು ಸಂತಾಪ ಸೂಚಿಸಿದ್ದಾರೆ. ರಾಜ್ಯ ಸರಕಾರ ಇಂದು ಸಾರ್ವತ್ರಿಕ ರಜೆ ಹಾಗೂ ಮೂರು ದಿನ ಶೋಕಾಚರಣೆ ಘೋಷಿಸಿದೆ. ಚಾಮರಾಜನಗರದ ಜಿಲ್ಲಾಡಳಿತವು ಇಂದು ಮತ್ತು ನಾಳೆ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದೆ.

Latest Videos

click me!