
ಬೆಂಗಳೂರು : ಅಗ್ನಿ ಶಾಮಕ ದಳದ ಡಿಐಜಿಪಿ ಎಚ್.ಎಸ್.ರೇವಣ್ಣ ಅವರನ್ನು ಉತ್ತರ ವಲಯದ ಐಜಿಪಿ ಪ್ರಭಾರಿಯಾಗಿ ನಿಯೋಜಿಸಿ ರಾಜ್ಯ ಸರ್ಕಾರವು ಗುರುವಾರ ಆದೇಶ ಹೊರಡಿಸಿದೆ.
ಉತ್ತರ ಐಜಿಪಿಯಾಗಿದ್ದ ಅಲೋಕ್ ಕುಮಾರ್ ಅವರನ್ನು ಸಿಸಿಬಿ ಮುಖ್ಯಸ್ಥರನ್ನಾಗಿ ಬೆಂಗಳೂರಿಗೆ ವರ್ಗಾವಣೆ ಮಾಡಿದ ನಂತರ ಆ ಸ್ಥಾನಕ್ಕೆ ಬೇರೊಬ್ಬರ ನೇಮಕವಾಗಿರಲಿಲ್ಲ.
ಈ ತಿಂಗಳ 10ರಿಂದ ಬೆಳಗಾವಿಯಲ್ಲಿ ವಿಧಾನಮಂಡಲದ ಉಭಯ ಸದನಗಳ ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ನೇಮಕ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.