
ಬೆಂಗಳೂರು (ಜೂ. 14): ಸಿಎಂ ಕುಮಾರಸ್ವಾಮಿ ತವರು ಜಿಲ್ಲೆ ರಾಮನಗರದಲ್ಲಿ ಕಾಮಗಾರಿ ಕಮೀಷನ್ ಗಾಗಿ ಧಮ್ಕಿ ಹಾಕಿರುವ ಘಟನೆ ನಡೆದಿದೆ.
ರಾಮನಗರ ತಾಲೂಕಿನ ಹುಣಸನಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ ಮರಲಿಂಗಯ್ಯ ಇಂಜಿನೀಯರ್’ಗೆ ಹಣದ ಬೇಡಿಕೆ ಇಟ್ಟಿದ್ದಾರೆ. ಕೊಡದಿದ್ದರೆ ಕುಮಾರ್ ಸ್ವಾಮಿಗೆ ಹೇಳುವುದಾಗಿ ಬೆದರಿಕೆ ಹಾಕಿದ್ದಾರೆ. ಹುಣಸನಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ ಮರಲಿಂಗಯ್ಯ ಇಂಜಿನಿಯರ್ ಜೊತೆ ಮಾತುಕತೆ ನಡೆಸಿರುವ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮುಖ್ಯಮಂತ್ರಿ ತವರಿನಲ್ಲೇ ಹೀಗಾದರೇ ಬೇರೆ ಹೇಗೆಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.