
ಮೋಳೆ : ಮನೆಗೆ ಬರಲು ಒಪ್ಪದೇ, ತವರು ಮನೆಯಲ್ಲೇ ಇರುವೆ ಎಂದ ಪತ್ನಿಯ ಮೂಗು, ತುಟಿ ಕೊಯ್ದು ಪತಿ ಮಹಾಶಯನೊಬ್ಬ ಪರಾರಿಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡದಲ್ಲಿ ಭಾನುವಾರ ಮಧ್ಯರಾತ್ರಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಕಾಗವಾಡದ ಸುನೀತಾ ನಾಯಿಕ (28) ಹಲ್ಲೆಗೊಳಗಾದವರು. ಮಹಾರಾಷ್ಟ್ರದ ಶಿರೋಳ ತಾಲೂಕಿನ ಶೇಡಶ್ಯಾಳ ಗ್ರಾಮದ ಸುರೇಶ ನಾಯಿಕ ಪತ್ನಿಯ ಮೇಲೆ ಹಲ್ಲೆ ನಡೆಸಿದ ಆರೋಪಿ. ಸುನೀತಾ ಅವರ ವಿವಾಹ 2 ವರ್ಷಗಳ ಹಿಂದೆ ಮಹಾರಾಷ್ಟ್ರದ ಸುರೇಶ್ ಜತೆ ನೆರವೇರಿತ್ತು.
ಮದುವೆ ಆದಾಗಿನಿಂದ ದಂಪತಿ ನಡುವೆ ಆಗಾಗ್ಗೆ ಜಗಳವಾಗುತ್ತಿತ್ತು. ಇದರಿಂದ ನೊಂದು ಕಾಗವಾಡದಲ್ಲಿರುವ ತವರುಮನೆಗೆ ವಾಪಸ್ ಬಂದಿದ್ದಳು. ಆಕೆಯನ್ನು ಕರೆದುಕೊಂಡು ಹೋಗಲು ಸುರೇಶ್ ಭಾನುವಾರ (ಜ.6) ಆಗಮಿಸಿದ್ದು, ಈ ವೇಳೆ ಇಬ್ಬರ ನಡುವೆ ಮತ್ತೆ ಜಗಳವಾಗಿದೆ. ಹಿರಿಯರ ಸಂಧಾನಕ್ಕೂ ಬಗ್ಗದ ಸುನೀತಾ, ಪತಿಯ ಮನೆಗೆ ಹೋಗಲು ನಿರಾಕರಿಸಿದ್ದಾಳೆ.
ಇದರಿಂದ ಬೇಸರಗೊಂಡ ಆಕೆಯ ಪತಿ ಸುರೇಶ, ಭಾನುವಾರ ರಾತ್ರಿ ಪತ್ನಿ ಮಲಗಿದ್ದಾಗ ಆಕೆಯ ಮೂಗು, ತುಟಿಯನ್ನು ಚಾಕುವಿನಿಂದ ಕತ್ತರಿಸಿ ಪರಾರಿಯಾಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.